ಈ ನನ್ನ ಪುಸ್ತಕಕ್ಕೆ ಕೂಡ ಸಾವಿಲ್ಲದ ಅಮರತ್ವ ಪ್ರಾಪ್ತವಾಗುತ್ತದೆ: ನರೇಂದ್ರ ಪೈ


'ಈ ಪುಸ್ತಕಗಳ ಓದು ಸಾವಿರದ ಒಂದು ಪುಸ್ತಕಗಳ ಓದಿಗೆ ಸಮ ಎಂದು ಯಾವುದೇ ಅನುಮಾನವಿಲ್ಲದೆ ಹೇಳಬಲ್ಲೆ. ಹಾಗಾಗಿಯೇ ಇಂಥ ಅದ್ಭುತ ಕೃತಿಗಳ ಬಗ್ಗೆ ನಿಮ್ಮ ಗಮನ ಹರಿಯುವಂತೆ ಮಾಡುವ ಕಾರಣಕ್ಕೇ ಈ ನನ್ನ ಪುಸ್ತಕಕ್ಕೆ ಕೂಡ ಸಾವಿಲ್ಲದ ಅಮರತ್ವ ಪ್ರಾಪ್ತವಾಗುತ್ತದೆ ಎನ್ನುವ ವಿಶ್ವಾಸ ನನ್ನದು' ಎನ್ನುತ್ತಾರೆ ಲೇಖಕ ನರೇಂದ್ರ ಪೈ. ಅವರು ತಮ್ಮ ಸಾವಿರದ ಒಂದು ಪುಸ್ತಕಕ್ಕೆ ಬರೆದ ಬೆನ್ನುಡಿ ನಿಮ್ಮ ಓದಿಗಾಗಿ. 

ಇಲ್ಲಿ ಕುಟ್ಸಿ, ಮಿಲನ್ ಕುಂದೇರಾ, ಇಕೊ ಉಂಬರ್ತೊ, ಓರಾನ್ ಪಮುಕ್, ಜೆನ್ನಿ ಎರ್ಪೆನ್‌ಬೆಕ್, ಓಲ್ಲಾ ತೊಗಾರ್ಝುಕ್, ಅದಾನಿಯಾ ಶಿಬ್ಲಿ, ಯೋನ ಫಾಸೆ, ಜಿಯಾ ಹೈದ‌ರ್ ರಹಮಾನ್, ಹನೀಫ್ ಖುರೇಶಿಯವರಂಥ ಪ್ರಸಿದ್ದ ಲೇಖಕರು, ನೊಬೆಲ್ ಪುರಸ್ಕೃತರ ಕೃತಿಗಳ ಕುರಿತ ಲೇಖನಗಳಿರುವಂತೆಯೇ ಭಾರತೀಯರಾದ ಅಂಜುಂ ಹಸನ್, ಸೈರಸ್ ಮಿಸ್ತ್ರಿ, ಗೀತಾಂಜಲಿ ಶ್ರೀ, ಅಜಿತನ್ ಕುರುಪ್, ಹರೀಶ್ ಎಸ್ ಕೃತಿಗಳ ಕುರಿತ ಲೇಖನಗಳೂ ಇವೆ. ಇಬ್ಬರು ಮೂವರನ್ನು ಹೊರತು ಪಡಿಸಿದರೆ ಎಲ್ಲರೂ ಸಮಕಾಲೀನರೇ, ಈಗಲೂ ಬರೆಯುತ್ತಿರುವವರೇ. ಆಸ್ಟ್ರೇಲಿಯಾ, ಬಾಂಗ್ಲಾ, ಪ್ಯಾಲಸ್ತೇನ್, ಟರ್ಕಿ, ಫ್ರಾನ್ಸ್, ಜರ್ಮನಿ ಮುಂತಾಗಿ ವಿವಿಧ ದೇಶಗಳ ಲೇಖಕರು ಇರುವಂತೆಯೇ ಈಶಾನ್ಯ ಭಾರತ, ಮಹಾರಾಷ್ಟ್ರ, ಕೇರಳದ ಲೇಖಕರು ಇಲ್ಲಿದ್ದಾರೆ. ಇವೆಲ್ಲ ವಿವರಗಳಿಗಿಂತ ಮುಖ್ಯವಾದದ್ದು ಇಲ್ಲಿ ಉಲ್ಲೇಖಗೊಂಡಿರುವ ಕೃತಿಗಳೆಲ್ಲವೂ ಪ್ರತಿಯೊಬ್ಬರೂ ಓದಲೇ ಬೇಕಾದಂಥವು, ಬದುಕನ್ನು ಶ್ರೀಮಂತಗೊಳಿಸುವಂಥವು, ಸಾರ್ಥಕಗೊಳಿಸುವಂಥವು ಎನ್ನುವುದರಲ್ಲಿ ಎರಡು ಮಾತಿಲ್ಲ. ಹಾಗಾಗಿಯೇ ಈ ಪುಸ್ತಕಗಳ ಓದು ಸಾವಿರದ ಒಂದು ಪುಸ್ತಕಗಳ ಓದಿಗೆ ಸಮ ಎಂದು ಯಾವುದೇ ಅನುಮಾನವಿಲ್ಲದೆ ಹೇಳಬಲ್ಲೆ. ಹಾಗಾಗಿಯೇ ಇಂಥ ಅದ್ಭುತ ಕೃತಿಗಳ ಬಗ್ಗೆ ನಿಮ್ಮ ಗಮನ ಹರಿಯುವಂತೆ ಮಾಡುವ ಕಾರಣಕ್ಕೇ ಈ ನನ್ನ ಪುಸ್ತಕಕ್ಕೆ ಕೂಡ ಸಾವಿಲ್ಲದ ಅಮರತ್ವ ಪ್ರಾಪ್ತವಾಗುತ್ತದೆ ಎನ್ನುವ ವಿಶ್ವಾಸ ನನ್ನದು!

-ನರೇಂದ್ರ ಪೈ
(ಬೆನ್ನುಡಿಯಿಂದ)

MORE FEATURES

'ಹೊಂಬಳ್ಳಿ' ಹಗುರ ಪ್ರಬಂಧ ಅಂತ ಹೇಳಿದರೂ ಗಂಭೀರ ಮಾತುಗಳು ಇಲ್ಲಿವೆ

20-05-2024 ಬೆಂಗಳೂರು

'ಈ ಪುಸ್ತಕದಲ್ಲಿರುವ ಲೇಖನಗಳನ್ನು ಓದುವಾಗ ನಾನು ನನ್ನ ಅಮ್ಮನ ಜೊತೆಗೆ ಗೆಳತಿ ಜೊತೆ ಮಾತನಾಡುತ್ತಿದ್ದೇನೆ ಎಂಬ ಆಪ್ತ...

'ಡೇರ್ ಡೇವಿಲ್ ಮುಸ್ತಫಾ' ಚಿತ್ರಕಥೆ ಪುಸ್ತಕ ಬಿಡುಗಡೆ 

19-05-2024 ಬೆಂಗಳೂರು

ಬೆಂಗಳೂರು: ಡೇರ್ ಡೆವಿಲ್ ಮುಸ್ತಫಾ ಚಿತ್ರಕಥೆಯ ಪುಸ್ತಕ ಬಿಡುಗಡೆ ಕಾರ್ಯಕ್ರಮವು 2024 ಮೇ 19ರಂದು ಬೆಂಗಳೂರಿನ ಸುಚಿತ್ರ...

ವಾರದ ಲೇಖಕ ವಿಶೇಷದಲ್ಲಿ ಖ್ಯಾತ ಕಾದಂಬರಿಕಾರ ಭಾರತೀಸುತ

19-05-2024 ಬೆಂಗಳೂರು

ಬುಕ್ ಬ್ರಹ್ಮ ವಾರದ ಲೇಖಕ ವಿಶೇಷದಲ್ಲಿ ಓದಿನೊಂದಿಗೆ ಸ್ವಾತಂತ್ರ್ಯದ ಕಿಚ್ಚು ಹತ್ತಿಸಿಕೊಂಡು ಸೆರೆ ವಾಸ ಅನುಭವಿಸಿದ ಕನ್ನ...