About the Author

ರಾಯಚೂರು ಜಿಲ್ಲೆಯ ಮಾನವಿ ತಾಲೂಕಿನ ನುಗಡೋಣಿಯಲ್ಲಿ 1960 ರಲ್ಲಿ ಜನಿಸಿದ ಅಮರೇಶ ನುಗಡೋಣಿಯವರು ಹಂಪಿಯ ಕನ್ನಡ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ದೇವನೂರು ಮಹಾದೇವರ ನಂತರದ ಲೇಖಕರಲ್ಲಿ ಶೋಷಣಾವ್ಯವಸ್ಥೆಯ ವಿವಿಧ ಮುಖಗಳನ್ನು ನುಗಡೋಣಿಯವರಷ್ಟು ಸಮರ್ಥವಾಗಿ ಚಿತ್ರಿಸಿದ ಲೇಖಕರು ಇನ್ನೊಬ್ಬರಿಲ್ಲ ಎಂದು ಹೇಳಬಹುದು.

ಸಾಹಿತ್ಯದ ಹಲವು ಮಜಲುಗಳಲ್ಲಿ ಕೆಲಸ ಮಾಡಿರುವ ಅವರು ಅನೇಕ ಕೃತಿಗಳನ್ನು ರಚಿಸಿದ್ದಾರೆ. ಅವರ ಕವನ ಸಂಕಲನಗಳು- ನೀನು, ಅವನು, ಪರಿಸರ. ಕಥಾ ಸಂಕಲನ- ಮಣ್ಣು ಸೇರಿತು ಬೀಜ, ಅರಿವು (ನವಸಾಕ್ಷರರಿಗಾಗಿ), ತಮಂಧದ ಕೇಡು, ಮುಸ್ಸಂಜೆಯ ಕಥಾನಕಗಳು, ಸವಾರಿ, ಹಾಗೂ ವ್ಯಕ್ತಿ ಪರಿಚಯ ಕೃತಿಯಲ್ಲಿ ಶ್ರೀಕೃಷ್ಣ ಆಲನಹಳ್ಳಿ (ಬದುಕು ಬರಹ)ವನ್ನು ರಚಿಸಿದ್ದಾರೆ. ಹಾಗೇ ಬಿಸಿಲ ಹನಿಗಳು ಎಂಬ ಕಥಾ ಸಂಕಲನವನ್ನು ಸಂಪಾದಿಸಿದ್ದಾರೆ.  ಸಾಹಿತ್ಯ ಕ್ಷೇತ್ರದ ಕಾರ್ಯಸಾಧನೆಗಾಗಿ 1989 ರಲ್ಲಿ ಜಯತೀರ್ಥ ರಾಜಪುರೋಹಿತ ಸ್ಮಾರಕ ದತ್ತಿ ಕಥಾ ಪ್ರಶಸ್ತಿ, 1991 ರಲ್ಲಿ “ಮಣ್ಣು ಸೇರಿತು ಬೀಜ” ಕಥಾ ಸಂಕಲನಕ್ಕೆ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಚುಕ್ಕಿ ಉಮಾಪತಿ ಪ್ರತಿಷ್ಠಾನ ಪ್ರಶಸ್ತಿ, ಗುಲಬರ್ಗಾ ವಿಶ್ವವಿದ್ಯಾಲಯದ ಪುಸ್ತಕ ಬಹುಮಾನ ಹಾಗು 1995 ರಲ್ಲಿ ಸರ್ ಎಂ.ವಿಶ್ವೇಶ್ವರಯ್ಯ ಸಾಹಿತ್ಯ ಪ್ರತಿಷ್ಠಾನ ಪ್ರಶಸ್ತಿ ದೊರೆತಿವೆ.

ಅಮರೇಶ ನುಗಡೋಣಿ

(02 Jun 1969)

BY THE AUTHOR

ABOUT THE AUTHOR