About the Author

ಲೇಖಕ ಎ. ಎಸ್. ಮಕಾನದಾರ ಅವರ ಹುಟ್ಟೂರು ಗಜೇಂದ್ರಗಡ. ಪ್ರಸ್ತುತ ಗದುಗಿನ ಒಂದನೇ ಹೆಚ್ಚುವರಿ ಕೌಟುಂಬಿಕ ನ್ಯಾಯಾಲಯದಲ್ಲಿ ಪ್ರಥಮ ದರ್ಜೆ ಸಹಾಯಕರಾಗಿದ್ದಾರೆ. ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ 10 ಸ್ವತಂತ್ರ ಕೃತಿಗಳನ್ನು, 16 ಸಂಪಾದಿತ ಕೃತಿಗಳನ್ನು ಪ್ರಕಟಿಸಿದ್ದಾರೆ. ಕುವೆಂಪು ವಿಶ್ವವಿದ್ಯಾಲಯದ ಬಿ.ಎ., ಬಿ.ಕಾಂ., ಬಿ.ಎಸ್ಸಿ., ಬಿ.ಎಸ್.ಡಬ್ಲೂ ಮೊದಲ ಸೆಮಿಸ್ಟರ್ ಗೆ ‘ಅಮ್ಮನ ಬಿಕ್ಕಳಿಕೆ ನಿಲ್ಲಿಸುವಿರಾ’ ಎಂಬ ಇವರ ಕವಿತೆ ಪಠ್ಯ ವಾಗಿ ಸೇರ್ಪಡೆ ಯಾಗಿದೆ. 

ಪ್ರಶಸ್ತಿ-ಗೌರವಗಳು:  ಸರಕಾರದಿಂದ ಜಿಲ್ಲಾ ಸರ್ವೋತ್ತಮ ಸೇವಾ ಪುರಸ್ಕಾರ, ಜಿಲ್ಲಾ ಕನ್ನಡ ರಾಜ್ಯೋತ್ಸವ ಪುರಸ್ಕಾರ, ಸಂತ ಶಿಶುನಾಳ ಶರೀಫ ಪುರಸ್ಕಾರ, ಭಾವೈಕ್ಯ ಪುರಸ್ಕಾರ, ರಾಷ್ಟ್ರಕೂಟ ಸಾಹಿತ್ಯ ಶ್ರೀ ಪುರಸ್ಕಾರ, ಕೊಪಳ ಸಿರಿಗನ್ನಡ ವೇದಿಕೆಯ ಕರುನಾಡಸಿರಿ, ಇಟಗಿ ಉತ್ಸವದ ಚಾಲುಕ್ಯ ವಿಕ್ರಮಾದಿತ್ಯ ಮುಂತಾದ ಗೌರವ ಪ್ರಶಸ್ತಿಗಳು ಸಂದಿವೆ.

ಪ್ರಸ್ತುತ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಜಿಲ್ಲಾ ಕನ್ನಡ ಜಾಗೃತಿ ಸಮಿತಿಯ ಸದಸ್ಯರು. ಅವರ ಹಲವಾರು ಕವಿತೆಗಳು ಹಿಂದಿ, ಇಂಗ್ಲಿಷ್ , ಮಲಯಾಳಂ, ತಮಿಳು ಭಾಷೆಗಳಿಗೆ ಅನುವಾದಗೊಂಡಿವೆ. ಮಕಾನದಾರ ಸಾಹಿತ್ಯ ಪ್ರತಿಷ್ಠಾನದ ಮೂಲಕ ನಾಡಿನ ವಿವಿಧ ಕ್ಷೇತ್ರಗಳ ಸಾಧಕರಿಗೆ ಗುರುತಿಸಿ ಗೌರವಿಸುವುದರ ಜೊತೆಗೆ ನಿರಂತರ ಪ್ರಕಾಶನದ ಮೂಲಕ ಹಲವು ಮಹತ್ವದ ಕೃತಿಗಳು ಪ್ರಕಟಗೊಂಡಿವೆ.

ಎ.ಎಸ್. ಮಕಾನದಾರ