ಸಾಹಿತಿ, ಸಂಶೋಧಕ, ಯಕ್ಷಗಾನ ಅರ್ಥಧಾರಿ, ವಿಮರ್ಶಕ ಹೀಗೆ ಹಲವು ಪ್ರತಿಭೆಯುಳ್ಳ ಹಿರಿಯ ಲೇಖಕ ಅತ್ತಿಮುರುಡು ವಿಶ್ವೇಶ್ವರ ಹೆಗಡೆ ಅವರು ಎಲೆಮರೆ ಕಾಯಿಯಂತೆ ಸಾಹಿತ್ಯ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಚತುರ್ಭಾಷಾ ಪ್ರವೀಣರಾದ ಇವರು ಸಾಮಾನ್ಯ ಕೌಟುಂಬಿಕ ಹಿನ್ನೆಲೆಯಲ್ಲಿ ಬೆಳೆದುಬಂದವರಾಗಿದ್ದು ಪರಿಸರ ಸಂಘಟನೆ, ಹೋರಾಟ ಅಲ್ಲದೇ ರಂಗಭೂಮಿಯಲ್ಲಿ ನಿರ್ದೇಶಕರಾಗಿ, ನಟರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಇತಿಹಾಸ ಸಂಶೋಧಕರಾಗಿರುವ ಅತ್ತಿಮುರುಡು ವಿಶ್ವೇಶ್ವರ ಹೆಗಡೆ ಅವರು ಕನ್ನಡ ಸಾಹಿತ್ಯಕ್ಕೆ ತಮ್ಮದೇ ಕೊಡುಗೆ ನೀಡಿದ್ದಾರೆ. ಪ್ರೊ.ರಾಧಾವಲ್ಲಭ ತ್ರಿಪಾಠಿ ಅವರ ಹಿಂದಿ ಕೃತಿಯನ್ನು ನಾಟ್ಯಶಾಸ್ತ್ರ ಪರಂಪರೆ ಮತ್ತು ಪ್ರಾಸಂಗಿಕತೆ ಎಂಬ ಹೆಸರಿನಲ್ಲಿ ಕನ್ನಡಕ್ಕೆ ಅನುವಾದಿಸಿದ್ದಾರೆ.