ಲೇಖಕ ಡಾ. ಪ್ರಭಾಕರ ಶಿಶಿಲ ಅವರು ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದಾರೆ. ಸಾಹಿತ್ಯದತ್ತ ಹೆಚ್ಚಿನ ಆಸಕ್ತಿ ಹೊಂದಿರುವ ಅವರು ಹಲವು ಕೃತಿಗಳನ್ನು ರಚಿಸಿದ್ದಾರೆ. ಜೊತೆಗೆ ಅರ್ಥಶಾಸ್ತ್ರದ ಪಠ್ಯಪುಸ್ತಕಗಳನ್ನು ರಚಿಸಿದ್ದಾರೆ. ಕೃತಿಗಳು: ಮತ್ಸ್ಯಗಂಧಿ, ಗಗ್ಗರ, ಬಾರಣೆ, ಗುಜರಿ ಅದ್ದಿಲಿಚ್ಚನ ಜಿಹಾದಿಯ, ಕೊಡಗಿನ ಐತಿಹ್ಯ ಕಥೆಗಳು, ಬೆಟ್ಟದಾ ಮೇಲೊಂದು, ಕಪಿಲಳ್ಳಿಯ ಕತೆಗಳು, ಜಲಲ ಜಲಧಾರೆ, ದೊಡ್ಡ ವೀರ ರಾಜೇಂದ್ರ, ಕೊಡಗಿನ ಕತೆಗಳು.
ಶಿಶಿಲರನ್ನೇ ಕುರಿತು ಅನೇಕ ಗ್ರಂಥಗಳು ಪ್ರಕಟವಾಗಿವೆ . ಸುವರ್ಣ ಅಭಿನಂದನಾ ಸ್ಮರಣಿಕೆ, ಸಾಹಿತ್ಯ ಶಿಶಿಲ: ಶಿಶಿಲರ ಸಮಗ್ರ ಸಾಹಿತ್ಯ ವಿಮರ್ಶೆ, ಶಿಶಿಲರ ಜೀವನ ಮತ್ತು ಸಾಧನೆಗಳು, ಪ್ರಭಾಕರ ಶಿಶಿಲರ ಸಾಹಿತ್ಯ ಕುರಿತು ಡಾ. ಮೋಹನ ಕುಮಾರ ಅವರು ಪಿಹೆಚ್.ಡಿ. ಮಹಾ ಪ್ರಬಂಧ ಬರೆದಿದ್ದಾರೆ. ಪ್ರಶಸ್ತಿಗಳು : ಗೊರೂರು ಪ್ರಶಸ್ತಿ, ಶಿವಮೊಗ್ಗ ಕರ್ನಾಟಕ ಸಂಘದಿಂದ ಕುವೆಂಪು ಕಾದಂಬರಿ ಪುರಸ್ಕಾರ, ಪುಟ್ಟರಾಜ ಗವಾಯಿ ಕಾದಂಬರಿ ಪ್ರಶಸ್ತಿ, ದಾವಣಗೆರೆಯ ಪಂಪ ಪ್ರತಿಷ್ಠಾನದ ಸಾಹಿತ್ಯಶ್ರೀ ಪ್ರಶಸ್ತಿ, ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಲಭಿಸಿವೆ.