ಬೆಂಗಳೂರಿನಲ್ಲಿ 1967ರ ನವೆಂಬರ್ 7 ರಂದು ಜನಿಸಿದ ಸುಮಾ ಅವರು ಮೂಲತಃ ತುಮಕೂರು ಜಿಲ್ಲೆಯ ಸಿರಾ ತಾಲೂಕಿನ ಭೂಪಸಂದ್ರದವರು.
ಬೆಂಗಳೂರು ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ (1990 ಕನ್ನಡ ಎಂ.ಎ.) ಪಡೆದು, 1992 ರಲ್ಲಿ ಕರ್ನಾಟಕ ಸರ್ಕಾರದ ಕಾಲೇಜು ಶಿಕ್ಕಣ ಇಲಾಖೆಗೆ ಉಪನ್ಯಾಸಕರಾಗಿ ನೇಮಕ ಹೊಂದಿದರು.
2007ರಲ್ಲಿ 'ಕನ್ನಡ ಸಾಹಿತ್ಯ ಪ್ರತಿಭೆ ಮತ್ತು ಪ್ರಭುತ್ವ : 1600-1900' ಎಂಬ ವಿಷಯದಲ್ಲಿ ಪಿಎಚ್.ಡಿ. ಪದವಿ ಪಡೆದರು. ಬೆಂಗಳೂರಿನ ವಿಜಯನಗರ ಬಡಾವಣೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸ್ನಾತಕೋತ್ತರ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. 2008ರಲ್ಲಿ ಇವರು ಸಂಪಾದಿಸಿದ 'ಡಾ.ಬಿ.ಆರ್.ಅಂಬೇಡ್ಕರ್ -ವರ್ತಮಾನದೊಂದಿಗೆ ಮುಖಾಮುಖಿ' ಕನ್ನಡ ಪುಸ್ತಕ ಪ್ರಾಧಿಕಾರದಿಂದ ಪ್ರಕಟವಾಯಿತು. ಕೋಟಿಗಾನಹಳ್ಳಿ ರಾಮಯ್ಯನವರು ಸಂಪಾದಿಸಿದ 'ತಲಪರಿಗೆ- ಜೀವನದಿಯ ಹಾಡು ಹಿಡಿದು ಅಸ್ಪಶ್ಯಲೋಕದಲ್ಲೊಂದು ಪಯಣ’ ಕೃತಿಯ ಸಂಪಾದಕ ಮಂಡಆಯಲ್ಲಿ ಒಬ್ಧರಾಗಿದ್ದರು. 'ಸಂವಾದ' ಮಾಸಿಕ ಪತ್ರಿಕೆಯಲ್ಲಿ ಇವರ ಲೇಖನ ಪ್ರಕಟವಾಗಿವೆ.