ಡಾ. ಸಿ. ನಾಗಣ್ಣ ಅವರು ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ತೌಲನಿಕ ಸಾಹಿತ್ಯ ಮತ್ತು ಭಾಷಾಂತರ ವಿಭಾಗದ ಪ್ರಾಧ್ಯಾಪಕರಾಗಿಯೂ, ಮೈಸೂರು ಮಹಾರಾಜಾ ಕಾಲೇಜಿನಲ್ಲಿ ಇಂಗ್ಲಿಷ್ ಸಾಹಿತ್ಯ ಬೋಧಕರಾಗಿಯೂ ಸೇವೆ ಸಲ್ಲಿಸಿ ನಿವೃತ್ತರು.
ಕವಿ, ವಿಮರ್ಶಕ, ಭಾಷಾಂತರಕಾರರಾಗಿ ಹಲವು ಗ್ರಂಥಗಳನ್ನು ರಚಿಸಿದ್ದಾರೆ. ಭಾರತೀಯ ಜ್ಞಾನಪೀಠ, ಸರಸ್ವತಿ ಸಮ್ಮಾನ್, ಕೇಂದ್ರ ಸಾಹಿತ್ಯ ಅಕಾಡೆಮಿಯ ಕನ್ನಡ ಸಲಹಾ ಸಮಿತಿಯ ಸದಸ್ಯರಾಗಿ ಕೆಲಸ ನಿರ್ವಹಿಸಿದ್ದರು. ಆಫ್ರಿಕನ್ ಲೇಖಕ ಚಿನುವ ಅಚಿಬೆಯ ಥಿಂಗ್ಸ್ ಫಾಲ್ ಅಪಾರ್ಟ್ ಕೃತಿಯನ್ನು ‘ಭಂಗ’ ಶೀರ್ಷಿಕೆಯಡಿ ಅನುವಾದಿಸಿದ್ದಾರೆ ಖ್ಯಾತ ಬರಹಗಾರ ಸಿ.ಎನ್. ರಾಮಚಂದ್ರನ್ ಅವರ ಬದುಕು-ಬರೆಹ ಕುರಿತ ಕೃತಿ ಪ್ರಕಟಿಸಿದ್ದಾರೆ.