ಬೆಂಗಳೂರಿನವರೇ ಆದ ಡಿ.ಮಂಗಳಾ ಪ್ರಿಯದರ್ಶಿನಿ ಅವರು ಬೆಂಗಳೂರು ವಿಶ್ವವಿದ್ಯಾಲಯದಿಂದ ಕನ್ನಡದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಬೆಂಗಳೂರಿನ ಹಲವು ಪದವಿ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿರುವ ಇವರು ವಿ.ವಿ.ಎಸ್. ಮಹಿಳಾ ಪದವಿ ಕಾಲೇಜಿನ ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಇವರ ಪ್ರಮುಖ ಕೃತಿಗಳೆಂದರೆ ನವೋದಯ ಕಾವ್ಯದಲ್ಲಿ ಅನುಭವದ ಅಂಶಗಳು- ಒಂದು ಅಧ್ಯಯನ, ಬೇಂದ್ರೆ, ವೀರಶೈವ ಶಟ್ಪದಿ ಸಾಹಿತ್ಯ, ಆಧುನಿಕ ಕನ್ನಡ ಕಾವ್ಯದ ಸ್ವರೂಪ, ಮಹಿಳಾ ಸಾಹಿತ್ಯ ಚರಿತ್ರೆ, ಸ್ತ್ರೀವಾದ ಮಹಿಳಾ ಅಧ್ಯಯನ- ಒಂದು ಪ್ರವೇಶಿಕೆ, ಕಡಲಾಚೆಯ ನೆನಪುಗಳು ಮುಂತಾದವು.
ಇವರಿಗೆ ರಾಷ್ಟ್ರಕವಿ ಕುವೆಂಪು ಸ್ಮಾರಕ ಪ್ರಶಸ್ತಿ, ಕರ್ನಾಟಕ ಲೇಖಕಿಯರ ಸಂಘದ ಎಚ್.ಎಸ್.ಪಾರ್ವತಿ ಪ್ರಶಸ್ತಿ, ಬಸವ ವೇದಿಕೆಯ ವಚನ ಸಾಹಿತ್ಯ ಶ್ರೀ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ತಿನ ರಾಜರಾಜೇಶ್ವರಿ ಪ್ರಶಸ್ತಿ ಮುಂತಾದ ಪ್ರಶಸ್ತಿಗಳು ಸಂದಿವೆ.