ದೇವಲಪಲ್ಲಿ ಎನ್. ಗಿರೀಶ್ ರೆಡ್ಡಿ ಅವರು ಮೂಲತಃ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ದೇವಲಪಲ್ಲಿ ಗ್ರಾಮದವರು. ಬೆಂಗಳೂರಿನ ವಿಶ್ವವಿದ್ಯಾಲಯದ ಸೆಂಟ್ರಲ್ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಮೈಸೂರಿನ ಮುಕ್ತ ವಿ.ವಿಯಿಂದ ಪತ್ರಿಕೋದ್ಯಮದಲ್ಲಿ ಡಿಪ್ಲೋಮ ಪದವಿಯನ್ನು ಪಡೆದಿದ್ದಾರೆ. ಕೆಲ ಕಾಲ ವಿಜಯ ಕರ್ನಾಟಕ ಪತ್ರಿಕೆಯಲ್ಲಿ ವರದಿಗಾರರಾಗಿ ಕಾರ್ಯನಿರ್ವಹಿಸಿದ್ದಾರೆ. ಪ್ರಸ್ತುತ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯೊಂದರಲ್ಲಿ ತರಬೇತುದಾರರಾಗಿದ್ದಾರೆ. ಕೃತಿಗಳು: ಪಯಣದ ಹಾದಿ