About the Author

ಕತೆಗಾರ ಫಕೀರ್ ಮುಹಮ್ಮದ್ ಕಟ್ಪಾಡಿ ಅವರು ಮೂಲತಃ ಉಡುಪಿ ಜಿಲ್ಲೆಯ ಬಾರಕೂರಿನವರು. 1949 ಜೂನ್ 25ರಂದು ಜನಿಸಿದರು. ಬಿ.ಕಾಂ. ಪದವೀಧರರಾಗಿದ್ದ ಅವರು ಬ್ಯಾಂಕ್ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿದ್ದಾರೆ.

’ಗೋರಿ ಕಟ್ಟಿಕೊಂಡವರು’, ’ನೋಂಬು’, ’ದಜ್ಜಾಲ’, ’ಅತ್ತರ್ ಹಾಜಿಕ್ ಮತ್ತು ಇತರ ಕತೆಗಳು’, ’ಪಚ್ಚ ಕುದುರೆ’ ಕತಾಸಂಕಲನಗಳು. ನೀಳ್ಗತೆಗಳ ಸಂಕಲನ ’ಕಡವು ಮನೆ’ ಹಾಗೂ ’ಸರಕುಗಳು’ ಮತ್ತು ’ಕಚ್ಚಾದ’ ಎಂಬ ಕಾದಂಬರಿಗಳನ್ನು ಪ್ರಕಟಿಸಿದ್ದಾರೆ.

’ಬೇರೂತಿನಿಂದ ಜರುಸಲೇಮಿಗೆ (2010) ಮತ್ತು ಮಂಟೋ ಬರೆದ ದೇಶ ವಿಭಜನೆಯ ಕತೆಗಳು’ ಅನುವಾದ ಕೃತಿಗಳು. ’ಕಯ್ಯೂರಿನ ರೈತವೀರರು’, ’ರಾಷ್ಟ್ರೀಯತೆ ಮತ್ತು ಮುಸ್ಲಿಮರು’, ’ಸೂಫಿ ಸಂತರು’ ’ಸೂಫಿ ಮಹಿಳೆಯರು’, ’ಉತ್ತರ ಕರ್ನಾಟಕದ ಸೂಫಿಸಂತರು’ ಕೃತಿಗಳನ್ನು ಪ್ರಕಟಿಸಿದ್ದಾರೆ.

ಕಟ್ಪಾಡಿ ಅವರು ಕರ್ನಾಟಕ ಸರ್ಕಾರ ನೀಡುವ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸಾಹಿತ್ಯಶ್ರೀ ಪ್ರಶಸ್ತಿಗಳು ದೊರೆತಿವೆ.

ಫಕೀರ್ ಮುಹಮ್ಮದ್ ಕಟ್ಪಾಡಿ

(25 Jun 1949)

Awards

BY THE AUTHOR