About the Author

ಡಾ| ಗಜಾನನ ಶರ್ಮಾರವರು ಪ್ರಸಿದ್ಧ ನಟ, ನಾಟಕಕಾರ, ನಿರ್ದೇಶಕ ಮತ್ತು ಸಾಹಿತಿಯು ಹೌದು. ವೃತ್ತಿಯಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಲ್ಲಿ ಅಧೀಕ್ಷಕ ಇಂಜಿನಿಯರ್ ಆಗಿದ್ದರು ಕನ್ನಡ ಸಾಹಿತ್ಯದ ಹಲವಾರು ರಂಗಗಳಲ್ಲಿ ತಮ್ಮ ಛಾಪನ್ನು ಮೂಡಿಸಿದ್ದಾರೆ. ’ಪುನರ್ವಸು’ ಇವರ ಪ್ರಮುಖ ಕಾದಂಬರಿ.  'ನಾಣಿ ಭಟ್ಟನ ಸ್ವರ್ಗದ ಕನಸು', 'ಗೊಂಬೆ ರಾವಣ', ಆಗ ಮತ್ತು ಸುಂದರಿ', 'ಹಂಚಿನಮನೆ ಪರಸಪ್ಪ', 'ಪುಸ್ತಕ ಪಾಂಡಿತ್ಯ' ಮುಂತಾದ ಹತ್ತಕ್ಕೂ ಹೆಚ್ಚು ಮಕ್ಕಳ ನಾಟಕ, 'ಕನ್ನಂಬಾಡಿಯ ಕಟ್ಟದಿದ್ದರೆ', 'ದ್ವಂದ್ವ ದ್ವಾಪರ', 'ಬೆಳ್ಳಿಬೆಳಕಿನ ಹಿಂದೆ' ಮುಂತಾದ ನಾಟಕಗಳನ್ನು ರಚಿಸಿದ್ದಾರೆ.

ವಿಶ್ವೇಶ್ವರಯ್ಯನವರ ವೃತ್ತಿ ಜೀವನದ ಆತ್ಮಕಥೆಯನ್ನು ಕನ್ನಡಕ್ಕೆ 'ನನ್ನ ವೃತ್ತಿ ಜೀವನದ ನೆನಪುಗಳು' ಎಂಬ ಶೀರ್ಷಿಕೆಯಡಿ ಅನುವಾದಿಸಿದ್ದಾರೆ.  'ಕನ್ನಡದಲ್ಲಿ ಮಕ್ಕಳ ನಾಟಕ ಮತ್ತು ರಂಗಭೂಮಿ' ಎಂಬ ಮಹಾಪ್ರಬಂಧಕ್ಕಾಗಿ ಹಂಪಿಯ ಕನ್ನಡ ವಿಶ್ವವಿದ್ಯಾ ಲಯದಿಂದ ಡಾಕ್ಟೋರೇಟ್ ಪದವಿ ಪಡೆದಿದ್ದಾರೆ. ಕನ್ನಡ ಸುಗಮ ಸಂಗೀತದ ಮೇರುಪ್ರತಿಭೆ ಗರ್ತಿಕೆರೆ ರಾಘಣ್ಣನವರ ಬದುಕಿನ ಚಿತ್ರಣವಾದ 'ಕಾಡು ಕಣಿವೆಯ ಹಾಡುಹಕ್ಕಿ ಗರ್ತಿಕೆರೆ ರಾಘಣ್ಣ' ಇವರ ಇನ್ನೊಂದು ಮಹತ್ವದ ಕೃತಿ. ’ಕೈಲಾಸ ಮಾನಸ', 'ಗೋಮುಖಆಗಿ ಹೋಗುವ ಮುನ್ನ ಕಣ್ಣುಂಬಿಕೊಳ್ಳೋಣ' (ಪ್ರವಾಸ ಕೃತಿ), “ನನ್ನ ವೃತ್ತಿಯ ನೆನಪುಗಳು” ಕೃತಿಯಲ್ಲಿ ಅವರ ವೃತ್ತಿ ಬದುಕಿನ ಅನುಭವವನ್ನು ದಾಖಲಿಸಿದ್ದಾರೆ. 

ಗಜಾನನ ಶರ್ಮ

Awards

BY THE AUTHOR