About the Author

ಜಾನಪದ, ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಗೊ. ರು. ಚನ್ನಬಸಪ್ಪರವರು ಚಿಕ್ಕಮಗಳೂರು ಜಿಲ್ಲೆಯ ಗೊಂಡೇದಹಳ್ಳಿಯಲ್ಲಿ ಜನಿಸಿದರು. ಗ್ರಾಮೀಣ ಬದುಕಿನ ಬಗ್ಗೆ ಮತ್ತು ಜಾನಪದ ಕ್ಷೇತ್ರವು ಅವರ ಆಸಕ್ತಿ ಕ್ಷೇತ್ರ. 1967ರಲ್ಲಿ ತರೀಕೆರೆಯಲ್ಲಿ ನಡೆದ ಜಾನಪದ ಸಮ್ಮೇಳನದ ಸಂದರ್ಭದಲ್ಲಿ ಹೊರತಂದ ಕೃತಿ ‘ಹೊನ್ನ ಬಿತ್ತೇವು ಹೊಲಕೆಲ್ಲ’ ಗ್ರಂಥದ ಸಂಪಾದಕರು. ಕೆ.ಆರ್. ಲಿಂಗಪ್ಪ ಅಭಿನಂದನಾ ಸಮಿತಿ ಪ್ರಕಟಿಸಿದ ‘ಗ್ರಾಮಜ್ಯೋತಿ’ ಇವೆರಡೂ ಕೃತಿಗಳೂ ಗೊ. ರು. ಚನ್ನಬಸಪ್ಪಅವರು ಸಂಪಾದಿಸಿ ವಿಶಿಷ್ಟ ಆಕರಗ್ರಂಥಗಳು. ಜಾನಪದ ವಸ್ತುವನ್ನಾಧರಿಸಿ ಬರೆದ ’ಸಾಕ್ಷಿ ಕಲ್ಲು, ಬೆಳ್ಳಕ್ಕಿ ಹಿಂಡು ಬೆದರ‍್ಯಾವೋ’ ರಂಗಭೂಮಿಯ ಮೇಲೆ ಅಪೂರ್ವ ಯಶಸ್ಸು ಕಂಡ ನಾಟಕಗಳು. 

’ವಿಭೂತಿ, ದಾಸೋಹ, ಸೇವಾ ಸಂಪದ’ ಮೊದಲಾದ ವಿಶಿಷ್ಟ ಕೃತಿರಚನೆ. ವಾರ್ತಾ ಇಲಾಖೆಯ ‘ಪಂಚಾಯತ್ ರಾಜ್ಯ’, ‘ಜನಪದ’ ಮಾಸಪತ್ರಿಕೆಗಳ ಸಹಾಯಕ ಸಂಪಾದಕರಾಗಿ ಪರಿಷತ್ ಪತ್ರಿಕೆ, ಜಾನಪದ ಜಗತ್ತು ಪತ್ರಿಕೆಗಳ ಸಂಪಾದಕರ ಜವಾಬ್ದಾರಿ. ಚಿತ್ರರಂಗದಲ್ಲೂ ಗಮನಾರ್ಹ ಸಾಧನೆ. ಕನ್ನಡ ಸಾಹಿತ್ಯ ಪರಿಷತ್ತು, ವಜ್ರಮಹೋತ್ಸವ, ಕರ್ನಾಟಕ ಜಾನಪದ ಕಲೆ, ಕನ್ನಡ ಪತ್ರಿಕೋದ್ಯಮ, ಸುತ್ತೂರ ಸಿರಿ, ಮೊದಲಾದ 40ಕ್ಕೂ ಹೆಚ್ಚು ಸಾಕ್ಷ್ಯ ಚಿತ್ರ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ನಾಡಿನಾದ್ಯಂತ ಪ್ರವಾಸ. ಸಾಹಿತ್ಯಾಭಿಮಾನಿಗಳಿಂದ ಏಳೆಂಟು ಲಕ್ಷರೂ ಸಂಗ್ರಹಣೆ. ಪರಿಷತ್ತಿನ ಸಿಬ್ಬಂದಿಯನ್ನು ಅನುದಾನದ ವ್ಯಾಪ್ತಿಗೆ ತಂದ ಕೀರ್ತಿ ಸಾಂಸ್ಕೃತಿಕ ಕಾರ‍್ಯಕ್ರಮ ಗೀತ-ಸಂಗೀತ, ಕಾವ್ಯ-ಕಾವೇರಿ ಪ್ರಾರಂಭಿಸಿದ ಹೆಗ್ಗಳಿಕೆ. ವಿದೇಶಿ ಕನ್ನಡಿಗರ ಆಹ್ವಾನದ ಮೇರೆಗೆ ಅಮೆರಿಕಾ ಭೇಟಿ. ಕರ್ನಾಟಕ ನಾಟಕ ಅಕಾಡಮಿ ಪ್ರಶಸ್ತಿ, ಕರ್ನಾಟಕದ ರಾಜ್ಯೋತ್ಸವ ಪ್ರಶಸ್ತಿ ಮುಂತಾದವು ಸಂದಿವೆ. ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಗೊ.ರು. ಚನ್ನಬಸಪ್ಪ

(18 May 1930)

ABOUT THE AUTHOR