About the Author

ಆಂಧ್ರಮೂಲದ ಸಾತವಲ್ಲಿ ವೇಂಕಟವಿಶ್ವನಾಥಭಟ್ಟ ಅವರು ಹರಿಹರಪ್ರಿಯ ಎಂದೇ ಪರಿಚಿತರು. ಮೈಸೂರಿನಲ್ಲಿ ಜನಿಸಿದ (ಜ. 1952) ಅವರು ಬೆಳೆದದ್ದು ಮಂಡ್ಯದಲ್ಲಿ. ಪ್ರೌಢಶಾಲೆಯವರೆಗೆ ಓದಿ ನಂತರ ’ಕನ್ನಡ ಜಾಣ’ದಲ್ಲಿ ಉನ್ನತಮಟ್ಟದ ಯಶಸ್ಸು ಸಾಧಿಸಿದ ಅವರು ರಾಷ್ಟ್ರಕವಿ ಕುವೆಂಪು ಅವರನ್ನು ಕನ್ನಡದ ಗುರು ಎಂದು ಕೊಂಡ ಹಾಗೆ ತೆಲುಗಿನ ಮಹಾಕವಿ ಶ್ರೀಶ್ರೀ ಅವರು ಹೋರಾಟಕ್ಕೆ ಗುರು. ಕಾವ್ಯ, ಕಾದಂಬರಿ, ಕತೆ, ನಾಟಕ, ವಿಚಾರ ವಿಮರ್ಶೆ, ಸಂಶೋಧನೆ, ವ್ಯಕ್ತಿಚಿತ್ರ, ತೌಲನಿಕ ಅಧ್ಯಯನ, ಗ್ರಂಥಸಂಪಾದನೆ, ಅಂಕಣ ಬರಹ ಮುಂತಾದ ಪ್ರಕಾರಗಳಲ್ಲಿ ಕೃತಿ ರಚನೆ ಮಾಡಿದ್ದಾರೆ. ನಾನ್ ಅಕಾಡೆಮಿಕ್ ಚಳವಳಿಗಾರ, ಸಾಂಸ್ಕೃತಿಕ ರಾಯಭಾರಿ ಎಂದು ಹೆಸರು. ’ಪುಸ್ತಕಮನೆ’ ಎನ್ನುವುದು ಅವರ ಅಪರೂಪದ ಪುಸ್ತಕ ಸಂಗ್ರಹ. ಸತತ ಐದು ವರ್ಷಗಳ ಕಾಲ ಪುಸ್ತಕ ಪ್ರದರ್ಶನ ನಡೆಸಿದ ದಾಖಲೆ ಅವರದು. ಅಪರೂಪದ ಸಾಹಿತ್ಯ ಕೃತಿಗಳ ಮತ್ತು ವ್ಯಕ್ತಿಗಳ ಬಗ್ಗೆ ಅಧಿಕೃತ ಮಾಹಿತಿ ನೀಡಬಲ್ಲ ಮಾಹಿತಿಕೋಶ. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕೆಂಪೇಗೌಡ ಪ್ರಶಸ್ತಿ, ಗಳಗನಾಥ ಪ್ರಶಸ್ತಿ, ವರ್ಧಮಾನ ಪ್ರಶಸ್ತಿ, ಆಂಧ್ರಪ್ರದೇಶದ ವಿ.ಆರ್. ನಾರ್‍ಲಾ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಹರಿಹರಪ್ರಿಯ (ಸಾತವಲ್ಲಿ ವೇಂಕಟವಿಶ್ವನಾಥಭಟ್ಟ)

BY THE AUTHOR