About the Author

ಖ್ಯಾತ ಲೇಖಕ ಶೇಷಾದ್ರಿಯವರು (26-05-1926) ಹುಟ್ಟಿದ್ದು ಹೊಂಗಸಂದ್ರದಲ್ಲಿ. ತಂದೆ ವೆಂಕಟರಾಮಯ್ಯ, ತಾಯಿ ಪಾರ್ವತಮ್ಮ. ಬೆಂಗಳೂರಿನ (19476) ಸೆಂಟ್ರಲ್ ಕಾಲೇಜಿನಿಂದ ರಸಾಯನ ಶಾಸ್ತ್ರದಲ್ಲಿ ಸ್ವರ್ಣಪದಕದೊಂದಿಗೆ ಎಂ.ಎಸ್ಸಿ. ಪದವೀಧರರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪೂರ್ಣಾವಧಿ ಕಾರ್ಯಕರ್ತರು. 1980ರಲ್ಲಿ ಕ್ಷೇತ್ರೀಯ (ಕರ್ನಾಟಕ, ಆಂಧ್ರ, ಕೇರಳ, ತಮಿಳುನಾಡು) ಪ್ರಚಾರ ಕಾರ‍್ಯ ನಿರ್ವಹಣೆ, ಸಂಘದ ಪ್ರಧಾನ ಕಾರ‍್ಯದರ್ಶಿಯಾಗಿಯೂ ಆಗಿದ್ದರು.ಸಂಘದ ವೈಚಾರಿಕ ಹಾಗೂ ಸೈದ್ಧಾಂತಿಕ ಬರಹಗಳನ್ನು ಬರೆದರು.  ವಿಕ್ರಮ, ಉತ್ಥಾನ-ಕನ್ನಡ ಪತ್ರಿಕೆಗಳಲ್ಲಿ, ಇಂಗ್ಲಿಷ್‌ನ ಆರ್ಗನೈಸರ್, ಹಿಂದಿಯ ಪಾಂಚಜನ್ಯ ಹಾಗೂ ದೇಶದ ಇತರ ಭಾಷೆಗಳ ನಿಯತ ಕಾಲಿಕೆಗಳಲ್ಲಿ ಲೇಖನ, ವಿಮರ್ಶಾತ್ಮಕ ವಿಶ್ಲೇಷಣೆಗಳನ್ನು ಬರೆದರು.

ಕೃತಿಗಳು-ಯುಗಾವತಾರ, ಅಮ್ಮಾ ಬಾಗಿಲು ತೆಗೆ, ಚಿಂತನಗಂಗಾ, ದೇಶ ವಿಭಜನೆಯ ದುರಂತ ಕಥೆ, ತುರ್ತು ಪರಿಸ್ಥಿತಿಯ ವಿರುದ್ಧ ಹೋರಾಟದ ‘ಭುಗಿಲು’, ಲಲಿತ ಪ್ರಬಂಧಗಳ ಸಂಗ್ರಹ ‘ತೋರ್ಬೆರಳು.’ ಇಂಗ್ಲಿಷ್‌ನಲ್ಲಿ-ಬಂಚ್ ಆಫ್ ಥಾಟ್ಸ್, ದಿ ಟ್ರಾಜಿಕ್ ಸ್ಟೋರಿ ಆಫ್ ಪಾರ್ಟಿಶನ್, ಆರ್‌ಎಸ್‌ಎಸ್-ಎ ವಿಷನ್ ಇನ್ ಆಕ್ಷನ್, ಯೂನಿವರ್ಸಲ್ ಸ್ಪಿರಿಟ್ ಆಫ್ ಹಿಂದೂ ನ್ಯಾಷಲಿಸಮ್, ದಿ ವೇ, ಯೋಗ-ಎ ಸೋಷಿಯಲ್ ಇಂಪರೆಟಿವ್ ಇತರೆ. ಹಿಂದಿ ಮತ್ತು ಮರಾಠಿಯಲ್ಲಿ ಕೃತಿ ರೂಪ್ ಸಂಘ ದರ್ಶನ್, ನಾನ್ಯ ಪಂಥ್, ಉಗವೇ ಸಂಘ ಪಹಾಟ್ ಇತರೆ ಕೃತಿರಚನೆ. ಕರ್ನಾಟಕ ಸಾಹಿತ್ಯ ಅಕಾಡಮಿ ಯು ಇವರ ಲಲಿತ ಪ್ರಬಂಧಗಳ ಸಂಕಲನ ತೋರ್ಬೆರಳು ಕೃತಿಗೆ ಪ್ರಶಸ್ತಿ ನೀಡಿತ್ತು. 14-08-1947 ರಂದು ನಿಧನರಾದರು. 

ಹೂ.ವೆ. ಶೇಷಾದ್ರಿ

(26 May 1926-14 Aug 2005)