ಇಂಗ್ಲೆಂಡಿನ ಲೀಡ್ಸ್ ವಿಶ್ವವಿದ್ಯಾಲಯದಿಂದ ರಂಗಕಲೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕೆ.ವಿ. ಅಕ್ಷರ ಅವರು ಹೆಗ್ಗೋಡಿನ ನೀನಾಸಮ್ ರಂಗಶಿಕ್ಷಣ ಕೇಂದ್ರದಲ್ಲಿ ಅಧ್ಯಾಪಕ. ಖ್ಯಾತ ರಂಗ ನಿರ್ದೇಶಕರಾಗಿರುವ ಅವರು ಸೃಜನಶೀಲ ಸಾಹಿತಿ, ನಾಟಕ, ಕವನ, ಪ್ರಬಂಧಗಳನ್ನು ರಚಿಸಿದ್ದಾರೆ.
ಸಹ್ಯಾದ್ರಿಕಾಂಡ, ಚೂರಿಕಟ್ಟೆ (ನಾಟಕಗಳು), ಹದಿಹರೆಯದ ಹಾಡುಗಳು (ಕವನ ಸಂಕಲನ), ರಂಗಪ್ರಪಂಚ, ರಂಗಪ್ರಯೋಗ, ರಂಗ ಅನ್ವೇಷಣೆ, ರಂಗಭೂಮಿ- ಪೂರ್ವ ಪಶ್ಚಿಮ (ರಂಗಕೃತಿ), ಮಾವಿನ ಮರದಲ್ಲಿ ಬಾಳೆಹಣ್ಣು (ವಿಮರ್ಶೆ). ಕರ್ನಾಟಕ ನಾಟಕ ಅಕಾಡೆಮಿಯ ಫೆಲೋಶಿಪ್ (2000) ಲಭಿಸಿದೆ.