ಕಾವ್ಯಾ ಕಡಮೆ ಉತ್ತರ ಕನ್ನಡ ಜಿಲ್ಲೆಯ ಕಡಮೆಯವರು. 1988ರಲ್ಲಿ ಜನನ. ಬಿಎಸ್ಸಿ ನಂತರ ಕರ್ನಾಟಕ ವಿವಿಯಿಂದ ಆರು ಚಿನ್ನದ ಪದಕಗಳೊಂದಿಗೆ ಪತ್ರಿಕೋದ್ಯಮ ಎಂ.ಎ ಪದವಿ. 2013ರಿಂದ ಅಮೆರಿಕಾದ ನ್ಯೂಜೆರ್ಸಿಯಲ್ಲಿ ವಾಸ. ‘ಧ್ಯಾನಕೆ ತಾರೀಖಿನ ಹಂಗಿಲ್ಲ’, ‘ಜೀನ್ಸ್ ತೊಟ್ಟ ದೇವರು’ ಪ್ರಕಟಿತ ಕವನ ಸಂಕಲನಗಳು. ‘ಮಾಕೋನ ಏಕಾಂತ’, ‘ತೊಟ್ಟು ಕ್ರಾಂತಿ’ ಕಥಾ ಸಂಕಲನಗಳು. ‘ಪುನರಪಿ’ ಕಾದಂಬರಿ. ‘ಆಟದೊಳಗಾಟ’ ಮತ್ತು ‘ಡೋರ್ ನಂಬರ್ ಎಂಟು’ ಹಾಗೂ ‘ಸಂಜೀವಿನಿ ಸ್ಟೋರ್ಸ್’ ನಾಟಕ ಸಂಕಲನಗಳು. ‘ದೂರ ದೇಶವೆಂಬ ಪಕ್ಕದ ಮನೆ’ ಪ್ರಬಂಧ ಸಂಕಲನ.
ಇವರ ಪದ್ಯ ಕೃತಿಗಳಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಯುವ ಪುರಸ್ಕಾರ, ಟೋಟೋ ಪುರಸ್ಕಾರ, ಕಡೆಂಗೋಡ್ಲು ಕಾವ್ಯ ಪುರಸ್ಕಾರ ಹಾಗೂ ದಿನಕರ ಕಾವ್ಯ ಪ್ರಶಸ್ತಿ ದೊರೆತಿದೆ. ಗದ್ಯ ಕೃತಿಗಳಿಗೆ ಛಂದ ಪುಸ್ತಕ ಬಹುಮಾನ, ರಾಘವೇಂದ್ರ ಪಾಟೀಲ ಕಥಾ ಪ್ರಶಸ್ತಿ, ಅಮ್ಮ ಪ್ರಶಸ್ತಿ, ಬೇಂದ್ರೆ ಗ್ರಂಥ ಬಹುಮಾನ, ರತ್ನಮ್ಮ ಹೆಗ್ಗಡೆ ಗ್ರಂಥ ಬಹುಮಾನ, ಡಾ. ಎಚ್. ಶಾಂತಾರಾಮ್ ಪ್ರಶಸ್ತಿ, ವೀಣಾ ಶಾಂತೇಶ್ವರ ಯುವ ಕತೆಗಾರ್ತಿ ಪ್ರಶಸ್ತಿ, ಸಾಹಿತ್ಯ ಪರಿಷತ್ತು ಮತ್ತು ಕರ್ನಾಟಕ ಲೇಖಕಿಯರ ಸಂಘದ ದತ್ತಿ ಪುರಸ್ಕಾರಗಳು ಹಾಗೂ ನಾಟಕ ಅಕಾಡೆಮಿಯ ನಾಟಕ ಬಹುಮಾನ ಸಂದಿದೆ.