ಕಾದಂಬನಿ ರಾವಿ ಅವರು ಹೈಡ್ರೋ ಇಂಜಿನಿಯರ್ಸ್ ಕಂಪನಿಯಲ್ಲಿ ಆಫೀಸ್ ಎಕ್ಸಿಕ್ಯೂಟೀವ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಮಾಸ್ತಿಕಟ್ಟೆಯಲ್ಲಿ ವಾಸವಾಗಿರುವ ಇವರು ಬಿಡುವಿನ ವೇಳೆಯಲ್ಲಿ ಓದು-ಬರಹವನ್ನು ಹವ್ಯಾಸವಾಗಿಸಿಕೊಂಡಿದ್ದಾರೆ. ಹಲವು ಪತ್ರಿಕೆಗಳು, ವೆಬ್ ಪೋರ್ಟಲ್ ಗಳಲ್ಲಿ ಕಾದಂಬಿನಿ ಅವರ ಹಲವು ಬರಹಗಳು ಪ್ರಕಟವಾಗಿವೆ. ‘ಹಲಗೆ ಮತ್ತು ಮೆದುಬೆರಳು’, ‘ಕಲ್ಲೆದೆಯ ಮೇಲೆ ಕೂತ ಹಕ್ಕಿ’ ಅವರ ಪ್ರಕಟಿತ ಕಾವ್ಯಸಂಕಲನಗಳು.