ಸಿನಿಮಾ, ಮಾಧ್ಯಮ ಮತ್ತು ವಿಜ್ಞಾನಗಳಿಗೆ ಸಂಬಂಧಿಸಿದಂತೆ ಬರೆಯುವ ಅಬ್ದುಲ್ ರೆಹಮಾನ್ ಪಾಷಾ ಕನ್ನಡ ಲೇಖಕರು.
ಗಾಂಧೀ ನೆಹರೂ ಆಯ್ದ ಪತ್ರಗಳು, ಅಭಿವೃದ್ಧಿ ಸಂವಹನ ಕೌಶಲ್ಯಗಳು, ಸರ್ವಾಂಗೀಣ ಬೆಳವಣಿಗೆಗಾಗಿ ಮಕ್ಕಳಲ್ಲಿ ವೈಜ್ಞಾನಿಕ ಮನೋವೃತ್ತಿ ಪೋಷಕರ ಜವಾಬ್ದಾರಿ, ವೈಜ್ಞಾನಿಕ ಮನೋವೃತ್ತಿ ಮಕ್ಕಳ ಹಕ್ಕು, ಶಿಕ್ಷಕರ ಹೊಣೆ, ನಿಮ್ಮ ಉಚ್ಚಾರಣೆ, ಧ್ವನಿಯನ್ನು ಸುಧಾರಿಸಿಕೊಳ್ಳಿ, ವೈಜ್ಞಾನಿಕ ಮನೋವೃತ್ತಿ ಬೆಳೆಸಿಕೊಳ್ಳುವ ಬಗೆ ಪುಸ್ತಕಗಳನ್ನು ಪ್ರಕಟಿಸಿದ್ದಾರೆ.
ವಿಶ್ವಮಾನ್ಯರು ಜೀವನ ಚರಿತ್ರೆ ಮಾಲೆಯಲ್ಲಿ ಮಹಾತ್ಮ ಗಾಂಧಿ, ಟೀಪು ಸುಲ್ತಾನ, ಜವಾಹರಲಾಲ್ ನೆಹರೂ, ಪ್ರವಾದಿ ಮುಹಮ್ಮದ್ ಕಿರುಹೊತ್ತಿಗೆಗಳು ಮುದ್ರಣ ಕಂಡಿವೆ. ನಂಬಿಕೆ ಮೂಢನಂಬಿಕೆ ವೈಜ್ಞಾನಿಕ ಮನೋವೃತ್ತಿ’ ಕೃತಿಗೆ ಕನ್ನಡ ಸಾಹಿತ್ಯ ಸಂವರ್ಧಕ ಟ್ರಸ್ಟ್‌ನ ‘ಕಾವ್ಯನಂದ’ ಪ್ರಶಸ್ತಿ (2015), ಶಿವಮೊಗ್ಗದ ಕರ್ನಾಟಕ ಸಂಘ, ಪಿ. ಲಂಕೇಶ್ ಹೆಸರಿನಲ್ಲಿ ನೀಡುವ ’ಅತ್ಯುತ್ತಮ ಮುಸ್ಲಿಮ್ ಲೇಖಕ ಪ್ರಶಸ್ತಿ, ನಾಡೋಜ ಡಾ. ಬರಗೂರು ಪ್ರತಿಷ್ಠನವು ವಿಚಾರ ಸಾಹಿತ್ಯಕ್ಕಾಗಿ ನೀಡುವ ರಾಜ್ಯ ಮಟ್ಟದ ’ಬರಗೂರು ಪುಸ್ತಕ ಪ್ರಶಸ್ತಿ’ (2015) ಗಳು ಸಂದಿವೆ.