About the Author

ಮಹಾಬಲೇಶ್ವರ ರಾವ್ ಅವರು 1952ರಲ್ಲಿ ಉಡುಪಿ ಜಿಲ್ಲೆಯ ಮಣೂರಿನಲ್ಲಿ ಜನಿಸಿದರು. ಎಂ.ಎ., ಎಂ.ಎಡ್ ಮತ್ತು ಪಿಎಚ್.ಡಿ. ಪದವೀಧರರಾದ ಅವರು ಆರು ವರ್ಷ ಪ್ರೌಢಶಾಲಾ ಕನ್ನಡ ಶಿಕ್ಷಕರಾಗಿ, ಮೂರು ವರ್ಷ ಆಕಾಶವಾಣಿಯ ಭದ್ರಾವತಿ ಹಾಗೂ ಮಂಗಳೂರು ಕೇಂದ್ರಗಳಲ್ಲಿ ಪ್ರಸಾರಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಮಹಾಬಲೇಶ್ವರ ರಾವ್‌ ಕಳೆದ ನಾಲ್ಕು ದಶಕಗಳಿಂದ ಕನ್ನಡ ಭಾಷಾ ಬೋಧನೆ, ಬರವಣಿಗೆ, ಭಾಷಣ, ಸಾಹಿತ್ಯ ಮೊದಲಾದ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಲೇಖಕರಾಗಿ, ಅನುವಾದಕರಾಗಿ, ಅಂಕಣಕಾರರಾಗಿ ತಮ್ಮದೇ ಛಾಪು ಮೂಡಿಸಿರುವ ಅವರು 14ವರ್ಷ ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿದ್ದಾರೆ.  ’ಉದಯವಾಣಿ’, ’ಪ್ರಜಾವಾಣಿ’, ’ತರಂಗ’, ’ಹೊಸತು’ ಮೊದಲಾದ ಕನಡ ದಿನಪತ್ರಿಕೆ, ಮ್ಯಾಗಸೈನ್‌ಗಳಲ್ಲಿ ಅವರ ನೂರಾರು ಲೇಖನಗಳನ್ನು ಪ್ರಕಟಣೆ ಕಂಡಿವೆ. 
ಕಾರಂತರ ದೃಷ್ಟಿ-ಸೃಷ್ಟಿ, ಭಾರತೀಯ ಜನಪದ ಕತೆಗಳು (ಎ.ಕೆ.ರಾಮಾನುಜನ್), ಮನೆ-ಶಾಲೆ, ಸಂಶೋಧನ ಮಾರ್ಗ, ಶಿಕ್ಷಣದಲ್ಲಿ ಮನೋವಿಜ್ಞಾನ, ಪ್ರೌಢ ಶಾಲೆಗಳಲ್ಲಿ ಕನ್ನಡ ಬೋಧನೆ, ಸ್ಥಿತ್ಯಂತರ, ಉದಯೋನ್ಮುಖ ಭಾರತದಲ್ಲಿ ಶಿಕ್ಷಣ, ಬಾಳಿಗೊಂದು ಭಾಷ್ಯ (೩ ಸಂಪುಟಗಳಲ್ಲಿ ಜೆ.ಕೆ.), ಪರಿಸರ ಶಿಕ್ಷಣ, ಮಹಿಳಾ ಶಿಕ್ಷಣ, ಪ್ರಾಥಮಿಕ ಶಿಕ್ಷಣ: ಸಮಸ್ಯೆಗಳು - ಸವಾಲುಗಳು ಅವರ ಪ್ರಮುಖ ಕೃತಿಗಳು.

’ಡಾ: ಹಾ.ಮಾ. ನಾಯಕ ದತ್ತಿನಿಧಿ ಪುರಸ್ಕಾರ’, ’ಗೊರೂರು ಸಾಹಿತ್ಯ ಪುರಸ್ಕಾರ’, ’ಶ್ರೀ.ವಸುದೇವ ಭೂಪಾಲಂ ದತ್ತಿನಿಧಿ ಪುರಸ್ಕಾರ’, ’ಉಪಾಧ್ಯಾಯ ಸಮ್ಮಾನ್ ರಾಜ್ಯ ಪುರಸ್ಕಾರ’. ’ಅಂತಾರಾಷ್ಟ್ರೀಯ ರೋಟರಿ ವೃತ್ತಿ ಶ್ರೇಷ್ಠತಾ ಪುರಸ್ಕಾರ’ ಮುಂತಾದ ಗೌರವ ಪುರಸ್ಕಾರಗಳು ಅವರನ್ನರಸಿವೆ.  ಇವರ  ‘ಶಿಕ್ಷಣದಲ್ಲಿ ಭಾಷೆ ಮತ್ತು ಮಾಧ್ಯಮದ ಸಮಸ್ಯೆಗಳು’ (ಮಾನವಿಕ) ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ 2019ನೇ ಸಾಲಿನ ಅತ್ಯುತ್ತಮ ಕೃತಿ ಬಹುಮಾನ ಲಭಿಸಿದೆ. 

ಮಹಾಬಲೇಶ್ವರ ರಾವ್

Books by Author

Awards