ಲೇಖಕ ಮೋದೂರು ತೇಜ ಅವರು ಮೂಲತಃ ಚಿತ್ರದುರ್ಗ ಜಿಲ್ಲೆಯ ಕರ್ನಾಟಕ -ಆಂಧ್ರ ಗಡಿಭಾಗದ ಮೋದೂರು ಗ್ರಾಮದವರು. ಪ್ರಾಥಮಿಕ -ಪ್ರೌಢ ಶಿಕ್ಷಣವನ್ನು ಮೋದೂರು, ಜಾಜೂರು, ಚಳ್ಳಕೆರೆ, ಹಾಗೂ ಚಿಕ್ಕಮಗಳೂರಿನಲ್ಲಿ ಪೂರ್ಣಗೊಳಿಸಿದ್ದು, ಮೈಸೂರಿನ ಮುಕ್ತ ವಿ.ವಿ.ಯಿಂದ ಎಂ.ಎ ಪದವಿ ಪಡೆದರು.
ಕೃತಿಗಳು: ಕನ್ನಡ ಪುಸ್ತಕ ಪ್ರಾಧಿಕಾರದ ಧನ ಸಹಾಯದೊಂದಿಗೆ ಪ್ರಕಟಿತ ಕವನ ಸಂಕಲನ-‘ಮರದೊಳಗಣ ಕಿಚ್ಚು (2007). ಬುದ್ಧನ ಮೇಲೂ ಯುದ್ಧ’(2010), ಭೂಮಿ ತೂಕದ ಪ್ರೀತಿ(2011), ಅರ್ಧಕ್ಕೆ ನಿಂತ ಚಿತ್ರ (2013), ಹುಲಿವೇಷ ಇವು ಕಥಾ ಸಂಕಲನಗಳು, ವೇದಾವತಿ ತೀರದಲ್ಲಿ (2011) ಹಾಗೂ ತುದಿ ಇರದ ಹಾದಿ-ಇವು ಕಾದಂಬರಿಗಳು, ನಾಡಿನ ವಿವಿಧ ಪತ್ರಿಕೆಗಳು ಆಯೋಜಿಸಿದ್ದ ಕಥಾ ಸ್ಪರ್ಧೆಯಲ್ಲಿ ಇವರ ಕಥೆಗಳು ಮೆಚ್ಚುಗೆ ಪಡೆದಿವೆ. ಚಿತ್ರದುರ್ಗದ ಶರಣ ಸಂಸ್ಕೃತಿ ಉತ್ಸವ 2014ನೇ ಕಥಾ ಸ್ಪರ್ಧೆಯಲ್ಲಿ ಮೊದಲ ಬಹುಮಾನ ಪಡೆದಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯ ಲೇಖಕರ ಪ್ರವಾಸ ಅನುದಾನ ಯೋಜನೆಯಡಿ ಸೀಮಾಂಧ್ರ ರಾಜ್ಯ ಪ್ರವಾಸದ ಅನುಭವಗಳ ಕಥನ ರೂಪವಾಗಿ "ತೇಟ ತೆಲುಗು ನಾಡಿನಲ್ಲಿ’ ಕೃತಿ ಪ್ರಕಟವಾಗಿದೆ. ಸದ್ಯ, ತುಮಕೂರು ಜಿಲ್ಲೆಯ ಮಧುಗರಿ ತಾಲೂಕಿನ ಬಡವನಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶಿಕ್ಷಕರಾಗಿದ್ದಾರೆ.