ಕವಿ, ನಾಟಕಕಾರ, ಪ್ರಕಾಶಕ, ಸಂಘಟಕ, ಸಮಾಜಚಿಂತಕ, ಸಾಹಿತಿ ಎನ್.ಆರ್. ನಾಯಕ ಅವರು ಜನಿಸಿದ್ದು 1935 ಜೂನ್ 28ರಂದು. ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲ್ಲೂಕಿನ ಭಾವಿಕೇರಿಯಲ್ಲಿ ಜನನ. ಇವರ ಪೂರ್ಣ ಹೆಸರು ನಾರಾಯಣ ರಾಮ ನಾಯಕ. ತಂದೆ ರಾಮನಾಯಕರು. ತಾಯಿ ದೇವಮ್ಮ. ವಿದ್ಯಾರ್ಥಿ ದೆಸೆಯಿಂದಲೇ ಸ್ವಾತಂತ್ಯ್ರ ಹೋರಾಟದಲ್ಲಿ ತೊಡಗಿಸಿಕೊಂಡಿದ್ದ ಇವರು ಬಿ.ಎ. ಪದವಿ ಪಡೆದರು. ಅಧ್ಯಾಪಕರಾಗಿ ವೃತ್ತಿ ಆರಂಭಿಸಿದ ಇವರು ಸಾಹಿತ್ಯ ಕೃಷಿಯಲ್ಲಿಯು ತೊಡಗಿಸಿಕೊಂಡಿದ್ದ ಇವರು ಹಲವು ಕೃತಿಗಳನ್ನು ರಚಿಸಿದ್ದಾರೆ. ಪ್ರಾಧ್ಯಾಪಕರಾಗಿ, ಪ್ರಾಚಾರ್‍ಯರಾಗಿ ಶಿಕ್ಷಣ ಕ್ಷೇತ್ರದಲ್ಲಿಯೂ ಸೇವೆಯನ್ನು ಸಲ್ಲಿಸಿದ್ದಾರೆ. ಜನಪದ ಸಾಹಿತ್ಯದಲ್ಲಿ ಅಪಾರವಾದ ಆಸಕ್ತಿಯನ್ನು ಹೊಂದಿರುವ ಅವರು ಸುಗ್ಗಿ ಕುಣಿತ, ಗುಮಟೆ ಪಾಂಗು, ಯಕ್ಷಗಾನ ಕಲೆಗಳಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ನಾಯಕರು ತಮ್ಮ ಜಾನಪದ ಪ್ರಕಾಶನದಿಂದ 1983ರಲ್ಲಿ ‘ಜಾನಪದ ದೀಪಾರಾಧನೆ’ ಎನ್ನುವ ಸಾಂಸ್ಕೃತಿಕ ಸಂಸ್ಥೆಯನ್ನು ಹುಟ್ಟುಹಾಕಿರುತ್ತಾರೆ. ಅವರ ‘ಕೂಸಾಯ್ತು ನಮ್ಮ ಕೊಮರಾಗೆ’(1983), ಗಾಮೊಕ್ಕಲ ಮಹಾಭಾರತ(1992), ಸುಗ್ಗಿ ಹಬ್ಬ(1999) ಕೃತಿಗಳಿಗೆ ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿಯಿಂದ ಬಹುಮಾನವು ದೊರೆತಿರುತ್ತದೆ. ಇವರ ‘ಹೇಳ್ತೇವೋ ಗುಮ್ಟೆ ಪದನಾವಾ’, ಉತ್ತರ ಕನ್ನಡ ಜಿಲ್ಲೆಯ ಜನಪದ ಆಟಗಳು’, ‘ಜೇಂಗೊಡ’, ‘ಕನ್ನಡ ಬಯಲಾಟ ಪರಂಪರೆ’ ಕೃತಿಗಳು ವಿಶ್ವವಿದ್ಯಾಲಯಗಳ ಪಠ್ಯ ಪುಸ್ತಕಗಳಾಗಿ ಮನ್ನಣೆ ಪಡೆದಿವೆ. ಉತ್ತರ ಕನ್ನಡ ಜಿಲ್ಲಾ ಪ್ರಥಮ ಜಾನಪದ ಸಮ್ಮೇಳನ, ಜಿಲ್ಲಾ ಏಳನೇ ಕನ್ನಡ ಸಾಹಿತ್ಯ ಸಮ್ಮೇಳನ, ಅಖಿಲ ಕರ್ನಾಟಕ 27ನೇ ಜಾನಪದ ಸಮ್ಮೇಳನ, ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಜಾನಪದ ಗೋಷ್ಠಿಗಳ ಅಧ್ಯಕ್ಷತೆಯು ಅವರಿಗೆ ಸಂದಿರುತ್ತದೆ.
ಕೃತಿಗಳು: ಗಾಮೊಕ್ಕಲ ಮಹಾಭಾರತ, ಹಾಲಕ್ಕಿ ಒಕ್ಕಲಿಗರು, ವಿಮೋಚನೆ(ನಾಟಕ ಕೃತಿ), ಚಿಂತನ ತರಂಗ, ಕೋಪ ನರಕದ ಬಾಗಿಲು, ಹುತ್ತವ ಬಡಿದರೆ ಹಾವು ಸಾಯಬಲ್ಲದೆ, ನ್ಯಾಯಾನ್ಯಾಯ ವಿವೇಚನೆ, ಬಾನುಲಿ ಅಲೆಗಳು, ಶರಣರ ಬೆಳಕಿನ ಪಥ, ಜಾನಪದ ಜಗಲಿಯಲ್ಲಿ(ಆತ್ಮಕಥನ), ಕಲಿಕೆಯ ಗುಡಿಲಲ್ಲಿ(ಅನುಭವ ಕಥನಗಳು), ಗಂಗೋತ್ರಿ, ಕರ್ನಾಟಕ ಬುಡಕಟ್ಟುಗಳು, ಗುಣ ಗೌರವ, ನಿಲಾಂಜನ, ಸೌಹಾರ್ದ ಸಂಗಮ(ಸಂಪಾದಕತ್ವದ ಕೃತಿಗಳು), ಕಾದು ಅರಳು(1981), ಹಂಸಪಥ(2001), ಕಾಡು ಹಾಡು(2005), ನೂರು ಪದ ನೂರು ಹದ(2007), ಮುರುಡ ಅರಳು(2009), ದೀಪಾರಾಧನೆ, ಕಲಶ(ಅಭಿನಂದನಾ ಗ್ರಂಥಗಳು).
ಪ್ರಶಸ್ತಿ-ಗೌರವಗಳು: ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿಯಿಂದ ‘ಜೌನಪದ ತಜ್ಞ’(1993), ಕರ್ನಾಟಕ ಸರಕಾರ ರಾಜ್ಯೋತ್ಸವ ಪ್ರಶಸ್ತಿ(2003), ಗೌರೀಶ ಕಾಯ್ಕಿಣಿ ಪ್ರತಿಷ್ಠಾನ ಪ್ರಶಸ್ತಿ,