ನರಸಿಂಹಮೂರ್ತಿ ಹಳೇಹಟ್ಟಿ ಅವರು ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಹಳೇಹಟ್ಟಿ ಗ್ರಾಮದವರು. ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಎಂ.ಎ. ಪದವಿ ಪಡೆದಿದ್ದು, 'ಸಮಕಾಲೀನ ಕನ್ನಡ ಕಾವ್ಯ: ಸ್ವರೂಪ ಮತ್ತು ಧೋರಣೆಗಳು' ವಿಷಯವಾಗಿ ಮಂಡಿಸಿದ ಮಹಾಪ್ರಬಂಧಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾಲಯ ಪಿಎಚ್.ಡಿ., ಪದವಿ ನೀಡಿದೆ.
ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರದಲ್ಲಿರುವ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಲ್ಲಿ ಸಂಯೋಜನಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದು, ಇವರ ಚೊಚ್ಚಲ ವಿಮರ್ಶಾ ಕೃತಿ ’ಕಾಗದದ ದೋಣಿ’.