ಕವಿ ರಮೇಶ ಅರೋಲಿ ಅವರು ಮೂಲತಃ ರಾಯಚೂರು ಜಿಲ್ಲೆಯ ಅಸ್ಕಿಹಾಳದವರು. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಅವರು ಎಳೆಯ ಪಾಪದ ಹೆಸರು ನಿಮ್ಮಂತೆ ಇಟ್ಟುಕೊಳ್ಳಿ (2010), ಜುಲುಮೆ (2014), ಒಳ ಮೀಸಲಾತಿ-ಮುಟ್ಟಲಾರದವನ ತಳಮಳ (ಸಹಸಂಪಾದನೆ) (2014), ಬಂಡಾಯದ ಬೋಳಬಂಡೆಪ್ಪ (ರಾಯಚೂರಿನ ದಲಿತ-ಬಂಡಾ ಚಳವಳಿಗಾರ ಬೋಳಬಂಡೆಪ್ಪನ ಬದುಕು-ಬರಹ), ತೀನ್ ಕಂದೀಲ್ (ನಾಟಕ) "ಬಿಡು ಸಾಕು ಈ ಕೇಡುಗಾಲಕ್ಕಿಷ್ಟು" (2021) (ಕವನ ಸಂಕಲನ) ಕೃತಿಗಳನ್ನು ರಚಿಸಿದ್ದಾರೆ.
ಶಿವಮೊಗ್ಗ ಕರ್ನಾಟಕ ಸಂಘದ ಡಾ. ಜಿ.ಎಸ್. ಶಿವರುದ್ರಪ್ಪ ಕಾವ್ಯ ಪ್ರಶಸ್ತಿ, ಡಾ. ಪು.ತಿ.ನ. ಕಾವ್ಯ ಪುರಸ್ಕಾರ, ಬಿಡಿಗವಿತೆಗಳಿವೆ ಸಂಚಯ, ಸಂಕ್ರಮಣ, ಪ್ರಜಾವಾಣಿ ಕಾವ್ಯ ಸ್ಪರ್ಧೆಯಲ್ಲಿ ಬಹುಮಾನ ದೊರೆತಿವೆ. ಅವರ ಕವಿತೆಗಳು ಇಂಗ್ಲಿಷ್, ಹಿಂದಿ, ತೆಲುಗು ಭಾಷೆಗಳಿಗೆ ಅನುವಾದಗೊಂಡಿವೆ. 2010ರಿಂದ ದೆಹಲಿ ವಿಶ್ವವಿದ್ಯಾಲಯದ ಕಮಲಾ ನೆಹರು ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿದ್ದಾರೆ.