About the Author

ವೈದ್ಯಕೀಯ ಹಾಗೂ ವೈಜ್ಞಾನಿಕ ಬರೆಹಗಳಲ್ಲಿ ಡಾ. ಎಸ್.ಜಿ. ನಾಗಲೋಟಿಮಠ ಹೆಸರು ಚಿರಪರಿಚಿತ. ಮೂಲತಃ ಬಾಗಲಕೋಟೆ ಜಿಲ್ಲೆಯವರು. ಇವರು ಜನಿಸಿದ್ದು 1940 ಜುಲೈ 20ರಂದು. ತಂದೆ ಜಂಬಯ್ಯ. ತಾಯಿ ಹಂಪವ್ವ್. ಹುಬ್ಬಳ್ಳಿಯ ಕರ್ನಾಟಕ ವ್ಯದ್ಯಕೀಯ ಮಹಾವಿದ್ಯಾಲಯದಲ್ಲಿ ವೈದ್ಯ ಪದವೀಧರರು. ಹುಬ್ಬಳ್ಳಿಯ ವೈದ್ಯಕೀಯ ಕಾಲೇಜಿನಲ್ಲಿ ಉಪನ್ಯಾಸಕರಾಗಿ, ನಂತರ ಕಿಮ್ಸ್ ನಿರ್ದೇಶಕರೂ ಹಾಗೂ ಕರ್ನಾಟಕ ವಿಜ್ಞಾನ ಪರಿಷತ್ತು ಮಾಜಿ ಅಧ್ಯಕ್ಷರೂ ಆಗಿದ್ದರು.  

ಕೃತಿಗಳು:  ಮಾನವ ದೇಹದ ಮಿಲಿಟರಿ ಪಡೆ, ವೈದ್ಯಕೀಯ ಪ್ರಯೋಗಾಲಯ, ಸರ್ವಜ್ಞ ವಚನಗಳಲ್ಲಿ ಆರೋಗ್ಯ, ಪ್ಲಾಸ್ಟಿಕ್‌ ಸರ್ಜರಿ, ಪರಿಸರ ಮಾಲಿನ್ಯ, ವೈದ್ಯಕೀಯ ವಿಶ್ವಕೋಶ.

ಪ್ರಶಸ್ತಿ- ಪುರಸ್ಕಾರಗಳು:  ಕನ್ನಡ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕುವೆಂಪು ವೈದ್ಯ ವಿಜ್ಞಾನ ಪ್ರಶಸ್ತಿ, ಡಾ.ಬಿ.ಸಿ. ರಾಯ ಪ್ರಶಸ್ತಿ, ವಿ.ಎಸ್. ಮುಂಗಳಿಕ ಪ್ರಶಸ್ತಿ, ಶ್ರೀ ಜಗದ್ಗುರು ರೇಣುಕಾಚಾರ್ಯ ಪ್ರಶಸ್ತಿ, ಅಲೆಂಬಿಕ್‌ ಸಂಶೋಧನಾ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳು ಸಂದಿವೆ. 

ಎಸ್.ಜೆ. ನಾಗಲೋಟಿಮಠ

(20 Jul 1940-24 Jul 2006)