ಶ್ರುತಿ ಮೂಲತಃ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಹಾಲೇನಹಳ್ಳಿ ಗ್ರಾಮದವರು. ತುಮಕೂರಿನ ನವೋದಯ ವಿದ್ಯಾಲಯದಲ್ಲಿ ವಿದ್ಯಾಭ್ಯಾಸ, ತುಮಕೂರಿನ ಸಿದ್ಧಾರ್ಥ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ಕಂಪ್ಯೂಟರ್ಸ್ ವಿಭಾಗದಲ್ಲಿ ಎಂಜಿನಿಯರಿಂಗ್ ಪದವಿ, ೨೦೧೨ರಲ್ಲಿ ಬೆಂಗಳೂರಿನಲ್ಲಿ ಟಾಟಾ ಕನ್ಸಲ್ಟನ್ಸಿ ಸರ್ವಿಸಸ್ ಸಂಸ್ಥೆಯಲ್ಲಿ ಉದ್ಯೋಗ ಆರಂಭ. ಸದ್ಯಕ್ಕೆ ಫಿಡಿಲಿಟಿ ಇನ್ಫರ್ಮೇಶನ್ ಸರ್ವಿಸಸ್ ನಲ್ಲಿ ಸಾಫ್ಟ್ವೇರ್ ಉದ್ಯೋಗಿ, ಬೆಂಗಳೂರಿನಲ್ಲಿ ವಾಸ. ಓದು, ಮಾತುಕತೆ, ಒಂದಷ್ಟು ಬರಹ ಹಾಗು ಹಾಡುಗಾರಿಕೆ ಇವರ ಹವ್ಯಾಸ.
ಕೃತಿ: “ಭಾರತದಲ್ಲಿ ಉಪರಾಷ್ಟ್ರೀಯತೆ ಮತ್ತು ಸಾಮಾಜಿಕ ಏಳಿಗೆ” ಇವರ ಮೊದಲ ಅನುವಾದಿತ ಪುಸ್ತಕ.