ಬೆಂಗಳೂರಿನ ವಿವೇಕಾನಂದ ಪದವಿ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿರುವ ಸುರೇಶ್ ನಾಗಲಮಡಿಕೆ ಅವರು ಹುಟ್ಟಿದ್ದು ಆಂಧ್ರದ ಗಡಿಭಾಗ ಪಾವಗಡದ ನಾಗಲಮಡಿಕೆಯಲ್ಲಿ. ಸದ್ಯ ಜನಪದ ಮಹಾಕಾವ್ಯಗಳ ಅಧ್ಯಯನದಲ್ಲಿ ತೊಡಗಿಸಿಕೊಡಿರುವ ಇವರು ಮುತ್ತು ಬಂದಿದೆ ಕೇರಿಗೆ, ತಕ್ಕ ಮಣ್ಣಿನ ತೇವಕ್ಕಾಗಿ, ಕನಕ ಸಾಹಿತ್ಯ ಮತ್ತು ಲೋಕದೃಷ್ಟಿ, ಕಾಣ್ಕೆ ಕಣ್ಕಟ್ಟು, ಬಯಲಾಗುವ ಪರಿ, ಉಳಿದದ್ದು ಆಕಾಶ, ಹಲವು ಬಣ್ಣದ ಹಗ್ಗ, ಮುಂತಾದ ಕೃತಿಗಳನ್ನು ರಚಿಸಿದ್ದಾರೆ. ವಿಮರ್ಶೆಗಳಲ್ಲಿಯೇ ಹೆಚ್ಚಿನ ಆಸಕ್ತಿಯನ್ನು ಹೊಂದಿದ ಸುರೇಶ್ ಅವರ ಹೇಚ್ಚಿನ ಪುಸ್ತಕಗಳು ಗದ್ಯಕ್ಕೇ ಸೇರಿವೆ.