ವಸುಂಧರಾ ಕೆ.ಎಂ ಅವರು ಮೂಲತಃ ಮಂಡ್ಯ ಜಿಲ್ಲೆ, ಮದ್ದೂರು ತಾಲ್ಲೂಕಿನ ಕದಲೂರು ಗ್ರಾಮದವರು. ಹುಟ್ಟಿದ್ದು 1981 ಸೆಪ್ಟಂಬರ್ 14ರಂದು. ಮೈಸೂರು ವಿಶ್ವವಿದ್ಯಾಲಯದಿಂದ ಕನ್ನಡ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.
ಕರ್ನಾಟಕ ಲೋಕಸೇವಾ ಆಯೋಗ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪ್ರಥಮ ಬಾರಿಗೇ ಉತ್ತೀರ್ಣರಾಗಿ 2006 ರಿಂದ ಕರ್ನಾಟಕ ರಾಜ್ಯ ಸರಕಾರಿ ಸೇವೆಯಲ್ಲಿದ್ದು ಪ್ರಸ್ತುತ ಕೃಷಿ ಮಾರಾಟ ಇಲಾಖೆಯಲ್ಲಿ ಉಪನಿರ್ದೇಶಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ‘ಮರೆತು ಬಿಟ್ಟದ್ದು’ ಇವರ ಪ್ರಥಮ ಕವನ ಸಂಕಲನ.