About the Author

ಹಿರಿಯ ಸಾಹಿತಿ ವಿರೂಪಾಕ್ಷಪ್ಪ ಕೋರಗಲ್ ಅವರು ಕೊಪ್ಪಳ ಜಿಲ್ಲೆಯ ವದಗನಹಾಳ ಗ್ರಾಮದವರು. ಅಪ್ಪಟ ಮೊಘಲಾಯಿಯ ಗ್ರಾಮೀಣ ಪ್ರತಿಭೆ. ಎರಡನೆಯ ವಯಸ್ಸಿಗೆ ತಾಯಿಯನ್ನು ಕಳೆದುಕೊಂಡು, ತಂದೆಯ ಆಶ್ರಯದಲ್ಲಿ ಬೆಳೆದರು. ಗವಿಮಠದಲ್ಲಿ ಶಿಕ್ಷಣ ಪೂರೈಸಿ 30 ವರ್ಷಗಳಿಂದ ಜೈನ ಸಾಹಿತ್ಯದ ಬಗ್ಗೆ ಸಂಶೋಧನೆ ಮಾಡುತ್ತ ಬಂದಿದ್ದಾರೆ. ಓದುವಿಕೆ ಅವರ ಹವ್ಯಾಸ. ಸಣ್ಣ ಕತೆ ಅವರ ಆರಂಭದ ಸಾಹಿತ್ಯ ಪ್ರಕಾರ. ಕತೆ, ಪುರಾಣ ಕಾವ್ಯ ರಚನೆ, ಕಾದಂಬರಿ, ಮಕ್ಕಳ ಸಾಹಿತ್ಯ ಸೇರಿದಂತೆ ಸಾಹಿತ್ಯದ ಹಲವು ಪ್ರಕಾರಗಳಲ್ಲಿ ಕೆಲಸ ಮಾಡಿದ್ದಾರೆ. ಗಣಿತದ ಪ್ರಾಧ್ಯಾಪಕರಾಗಿ, ಗಣಿತದ ಸಂಶೋಧನೆಯನ್ನು ಕನ್ನಡದಲ್ಲಿ ಮಾಡಿದ್ದಾರೆ.

ಕೃತಿಗಳು: ಮುತ್ತಿನ ಚಿಪ್ಪಿನ ಸೂತ್ರಗಳು, ಭೂ ಅಳತೆಯಕ್ಷೇತ್ರ ಗಣಿತ, ಕಾವೇರಿಯಿಂದ ಗೋದಾವರಿವರೆಗೆ, ರಾಜಾದಿತ್ಯ, ನಾಯಿ 

ವಿರೂಪಾಕ್ಷಪ್ಪ ಕೋರಗಲ್‌

ABOUT THE AUTHOR