ವಿವೇಕಾನಂದ ಸಜ್ಜನ ಅವರು ಕಲುಬುಗಿ ಜಿಲ್ಲೆಯಲ್ಲಿ 1992ರಲ್ಲಿ ಜನಿಸಿದರು. ಬೀದರ ಜಿಲ್ಲೆಯ ಬಸವಕಲ್ಯಾಣ ತಾಲ್ಲೂಕಿನ ಹಾರಕೂಡ ಸ್ವಗ್ರಾಮ. 2015ರಲ್ಲಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಕಲಬುರಗಿಯಿಂದ ಚಿನ್ನದ ಪದಕದೊಂದಿಗೆ ಎಂ.ಎ ಕನ್ನಡ ಪಡವಿ ಪಡೆದಿರುವ ಅವರು ಹಳೆಗನ್ನಡ, ಮಧ್ಯಕಾಲೀನ ಕನ್ನಡ ಸಾಹಿತ್ಯ ಆಸಕ್ತಿಯ ಕ್ಷೇತ್ರಗಳು. ಜೊತೆಗೆ ಶಾಸ್ತ್ರೀಯ ಸಂಗೀತದ ವಿದ್ಯಾರ್ಥಿ, ಕನ್ನಡ ಪುಸ್ತಕ ಪ್ರಾಧಿಕಾರವು ಯುವ ಬರಹಗಾರರ ಚೊಚ್ಚಲ ಕೃತಿಗೆ ನೀಡುವ ಪ್ರೋತ್ಸಾಹ ಧನಕ್ಕೆ ವಚನ ವೈವಿಧ್ಯ ವಿಮರ್ಶಾ ಲೇಖನಗಳ ಸಂಕಲನ ಆಯ್ಕೆ, 2018ರಲ್ಲಿ ಪ್ರಕಟ, ದ್ವಿತೀಯ ಕೃತಿ ಕನ್ನಡ ರಾಮಾಯಣಗಳಲ್ಲಿ ರಾವಣ 2019ರಲ್ಲಿ ಪ್ರಕಟವಾಗಿದೆ. ಪ್ರಸ್ತುತ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಕಡಗಂಚಿಯ ಕನ್ನಡ ವಿಭಾಗದಲ್ಲಿ ಕನ್ನಡ ಬಸವ ಕಥನಗಳು:ತೌಲನಿಕ ಅಧ್ಯಯನ ಎಂಬ ವಿಷಯದಲ್ಲಿ ಸಂಶೋಧನಾ ಅಧ್ಯಯನ, ಹಲವು ರಾಷ್ಟ್ರೀಯ ವಿಚಾರ ಸಂಕಿರಣಗಳಲ್ಲಿ ಪ್ರಬಂಧ ಮಂಡನೆ ಮಾಡಿದ್ದಾರೆ.