ವೈ.ಎಸ್. ಗೌರಮ್ಮ ಅವರು ಮೈಸೂರು ವಿಶ್ವವಿದ್ಯಾನಿಲಯದ ಮಹಾರಾಜ ಕಾಲೇಜಿನಲ್ಲಿ ತತ್ವಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿ, ಮುಖ್ಯಸ್ಥರಾಗಿ 36 ವರ್ಷಗಳ ಕಾರ್ಯನಿರ್ವಹಿಸಿದ್ದಾರೆ. ವಿಶ್ವವಿದ್ಯಾನಿಲಯದ ಕಾಲೇಜುಗಳಲ್ಲಿ ಪ್ರಾಂಶುಪಾಲರಾಗಿ 5 ವರ್ಷಗಳ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಈವರೆಗೆ ಅವರು ತತ್ವಶಾಸ್ತ್ರಕ್ಕೆ ಸಂಬಂಧಿಸಿದಂತೆ ಆರಕ್ಕೂ ಹೆಚ್ಚಿನ ಕೃತಿಗಳನ್ನು ಹೊರತಂದಿದ್ದಾರೆ.