ಯಶಸ್ವಿನಿ ಶ್ರೀಧರ ಮೂರ್ತಿ ಅವರು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಮೇಣಸಿಕೇರಿಯವರು. ಪ್ರಾಥಮಿಕ ಶಿಕ್ಷಣವನ್ನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹೀಪನಳ್ಳಿಯಲ್ಲಿ ಪಡೆದ ಇವರು ಪ್ರೊಗ್ರೆಸ್ಸಿವ್ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಪ್ರೌಢಶಿಕ್ಷಣವನ್ನು ಪೂರೈಸಿದರು. ಶಿರಸಿಯ ಎಮ್.ಇ.ಎಸ್. ಮಹಾವಿದ್ಯಾಲಯದಲ್ಲಿ ವಿಜ್ಞಾನ ವಿಭಾಗದಲ್ಲಿ ಪದವಿಪೂರ್ವ ಶಿಕ್ಷಣ ಹಾಗೂ ಪದವಿ ಶಿಕ್ಷಣವನ್ನು ಪೂರೈಸಿ, ಮೈಸೂರಿನ ಶಾರದಾ ವಿಲಾಸ ಮಹಾವಿದ್ಯಾಲಯದಿಂದ ಬಿ. ಎಡ್. ಪದವಿ, ಶಿವಮೊಗ್ಗದ ಕುವೆಂಪು ವಿಶ್ವ ವಿದ್ಯಾಲಯದಿಂದ ಗಣಿತ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನೂ ಪಡೆದಿದ್ದಾರೆ. ಪುಸ್ತಕಗಳನ್ನು ಓದುವುದು, ಚಿತ್ರ ಬಿಡಿಸುವುದು, ಕಥೆ, ಕವನ, ಲೇಖನಗಳನ್ನು ಬರೆಯುವುದು ಇವರ ಹವ್ಯಾಸ. ಹಲವಾರು ಪತ್ರಿಕೆಗಳಲ್ಲಿ ಇವರ ಲೇಖನಗಳು, ಕವನಗಳು ಪ್ರಕಟವಾಗಿವೆ. 200 ಕ್ಕೂ ಹೆಚ್ಚು ಅಂತರ್ಜಾಲ ಆಧಾರಿತ ರಾಜ್ಯಮಟ್ಟದ ಸಾಹಿತ್ಯಿಕ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದಾರೆ. ಕೃತಿಗಳು; ಕಪ್ಪು ಬಿಳುಪಿನ ನಡುವೆ