ಕಾದಂಬರಿಗಾರ್ತಿ ಆರ್‍ಯಾಂಬ ಪಟ್ಟಾಭಿ ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವೀಧರೆ. 1936 ಮಾರ್ಚ್ 12 ರಂದು ಮಂಡ್ಯದಲ್ಲಿ ಜನಿಸಿದರು. ತಂದೆ ಬಿ. ಎಂ. ಕೃಷ್ಣಸ್ವಾಮಿ, ತಾಯಿ ತಂಗಮ್ಮ. ’ಹೊಂಗನಸು, ಆರಾಧನೆ, ಸವತಿಯ ನೆರಳು, ಕಪ್ಪು-ಬಿಳುಪು, ನನ್ನವಳು’ ಅವರ ಕಥಾಸಂಕಲನಗಳು. ’ಅನುರಾಗ’, ನರಭಿಕ್ಷುಕ ಕಾದಂಬರಿಗಳನ್ನುಹಾಗೂ ಮಕ್ಕಳ ಮತ್ತು ಕ್ರೀಡೆಗೆ ಸಂಬಂಧಿಸಿದ ಕೃತಿಗಳನ್ನು ರಚಿಸಿದ್ದಾರೆ. 'ಟೆನ್ನಿಸ್'’ ಕೃತಿಗೆ ಮಲ್ಲಿಕಾ ಪ್ರಶಸ್ತಿ, ಬಿ. ಸರೋಜದೇವಿ ಶ್ರೀಹರ್ಷ ಪ್ರಶಸ್ತಿ ಸಂದಿವೆ.