ಅನಸೂಯಾ ಜಹಗೀರದಾರ ಅವರು ಮೂಲತಃ ಕೊಪ್ಪಳದವರು. ಕವಯತ್ರಿ, ಬರಹಗಾರರೂ, ಹಿಂದುಸ್ತಾನಿ ಸಂಗೀತ ಕಲಾವಿದೆಯೂ ಹೌದು. ಸರಕಾರಿ ಪ್ರೌಢ ಶಾಲಾ ಶಿಕ್ಷಕರು, ಕನ್ನಡ ಪರ ವಿವಿಧ ಸಂಘಟನೆಗಳಲಿ ಪದಾಧಿಕಾರಿ, ಕಾರ್ಯಕಾರಿ ಸಮಿತಿ ಸದಸ್ಯರು ಹಾಗು ಅಧ್ಯಕ್ಷರು.ಕನ್ನಡ ಮತ್ತು ಸಮಾಜಶಾಸ್ತ್ರ ವಿಷಯದಲ್ಲಿ ಎಂ ಎ, ಬಿ.ಇಡಿ ಪದವೀಧರರು.
ಕೃತಿಗಳು: ಒಡಲಬೆಂಕಿ (2014), ಆತ್ಮಾನುಸಂಧಾನ (ಗಜಲ್-2021), ನೀಹಾರಿಕೆ (ಹನಿಗವಿತೆಗಳು- 2021) ಇವರ ಕವನ ಸಂಕಲನಗಳು.
ಪ್ರಶಸ್ತಿ-ಪುರಸ್ಕಾರಗಳು: ಡಾ.ಡಿ. ಎಸ್. ಕರ್ಕಿ ರಾಜ್ಯ ಕಾವ್ಯ ಪ್ರಶಸ್ತಿ ( ಡಾ. ಡಿ. ಎಸ್. ಕರ್ಕಿ ಪ್ರತಿಷ್ಠಾನ. ಬೆಳಗಾವಿ-ಒಡಲಬೆಂಕಿ ಕೃತಿಗೆ 2015ರಲ್ಲಿ), ಕಾವ್ಯಶ್ರೀ ಪ್ರಶಸ್ತಿ ( ಕಸ್ತೂರಿ ಸಿರಿಗನ್ನಡ ಬಳಗ ಮಂಡ್ಯ), ಕುವೆಂಪು ರಾಜ್ಯ ಕಾವ್ಯ ಪುರಸ್ಕಾರ ( ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಬೆಂಗಳೂರು. ಜಿಲ್ಲಾ ಘಟಕ ಶಿವಮೊಗ್ಗ), ಕೊಪ್ಪಳ ಜಿಲ್ಲಾ ರಾಜ್ಯೋತ್ಸವ ಪುರಸ್ಕಾರ- 2015 ರಲ್ಲಿ, ಕೊಪ್ಪಳ ಜಿಲ್ಲಾ ಮಹಿಳಾ ಒಕ್ಕೂಟ ಪುರಸ್ಕಾರ, ಸಂಯುಕ್ತ ಕರ್ನಾಟಕ ಯುಗಾದಿ ಕಾವ್ಯ ಸ್ಪರ್ದೆ
ಮೆಚ್ಚುಗೆ ಬಹುಮಾನ ಮಾತ್ರವಲ್ಲದೆ ಉತ್ತಮ ವಿಶೇಷ ಶಿಕ್ಷಕಿ ರಾಜ್ಯ ಪ್ರಶಸ್ತಿ ( 2007) ಸೇರಿದಂತೆ ಅನೇಕ ಪ್ರಶಸ್ತಿಗಳು ಇವರಿಗೆ ಸಂದಿವೆ.