ಅನಿಲ್ ಗುನ್ನಾಪೂರ ಅವರು ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಹಿರೇಮಸಳಿಯವರು. ಸದ್ಯ ಬಾಗಲಕೋಟೆಯಲ್ಲಿ ಸರ್ಕಾರಿ ಭೂಮಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 'ಗುಬ್ಬಚ್ಚಿ ಗೂಡಿನಲ್ಲಿ' ಇವರ ಚೊಚ್ಚಲ ಕವನಸಂಕಲನ. ಈ ಕೃತಿ 2016ರಲ್ಲಿ ಪುಸ್ತಕ ಪ್ರಾಧಿಕಾರದಿಂದ ಪುರಸ್ಕೃತಗೊಂಡಿದೆ. ಪ್ರಜಾವಾಣಿ ಮತ್ತು ಇನ್ನಿತರ ಪತ್ರಿಕೆಗಳಲ್ಲಿ ಇವರ ಕಥೆ- ಕವಿತೆಗಳು ಪ್ರಕಟವಾಗಿವೆ. 2018 ನೇ ಸಾಲಿನ ಪ್ರಜಾವಾಣಿ ದೀಪಾವಳಿ ಕಾವ್ಯ ಸ್ಪರ್ಧೆಯಲ್ಲಿ ಇವರ ಕವಿತೆಗೆ ಮೂರನೇ ಬಹುಮಾನ ಲಭಿಸಿದೆ. 'ಕಲ್ಲು ಹೂವಿನ ನೆರಳು' ಇವರ ಚೊಚ್ಚಲ ಕಥಾಸಂಕಲನ.