ಅಶೋಕಬಾಬು ಎನ್. ಕಾವಲ್ ಅವರು ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಗರಗಪಳ್ಳಿ ಗ್ರಾಮದವರು. ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಶಾಸ್ತ್ರೀಯ ಕನ್ನಡ ಅಧ್ಯಯನ ಕೇಂದ್ರದಲ್ಲಿ 'ಕಲ್ಯಾಣ ಚಾಲುಕ್ಯರ ಶಾಸನಗಳ ವರ್ಣನಾತ್ಮಕ ವ್ಯಾಕರಣ' ಎಂಬ ವಿಷಯದ ಮೇಲೆ ಡಾ. ಬಸವರಾಜ ಕೋಡಗುಂಟಿ ಅವರ ಮಾರ್ಗದರ್ಶನದಲ್ಲಿ ಪಿಎಚ್.ಡಿ ಪದವಿಯನ್ನು ಪೂರೈಸಿದ್ದಾರೆ. ಭಾಷೆ, ಶಾಸನ ಅಧ್ಯಯನದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು ವಿವಿಧ ಪತ್ರಿಕೆಗಳಲ್ಲಿ ಲೇಖನಗಳನ್ನು ಪ್ರಕಟಿಸಿದ್ದಾರೆ. ಅದರೊಟ್ಟಿಗೆ ಸಂಸ್ಕೃತಿ ಅಧ್ಯಯನ, ಸ್ಥಳೀಯ ಅಧ್ಯಯನ ಮೊದಲಾದ ಕ್ಷೇತ್ರಗಳಲ್ಲಿಯೂ ಲೇಖನಗಳನ್ನು ಪ್ರಕಟಿಸಿದ್ದಾರೆ. ಮತ್ತು ಹಲವು ವಿಚಾರ ಸಂಕಿರಣಗಳಲ್ಲಿ ಪ್ರಬಂಧಗಳನ್ನು ಮಂಡಿಸಿದ್ದಾರೆ. ಸದ್ಯ ಇವರು ಬೆಂಗಳೂರಿನಲ್ಲಿರುವ ಅಮಿಟಿ ವಿಶ್ವವಿದ್ಯಾಲಯದಲ್ಲಿ ಕನ್ನಡ ಭಾಷೆಯ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.