ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಕೃಷಿ ಕುಟುಂಬದವರಾದ ಅಶ್ವಿನಿ ಕೋಡಿಬೈಲು ಅವರು ವಳಂಗಜೆ ಗೋಪಾಕೃಷ್ಣ ಭಟ್ ಹಾಗೂ ಶಂಕರಿ ದಂಪತಿಯ ಪುತ್ರಿ, ರಾಮಚಂದ್ರ ಕೋಡಿಬೈಲು ಅವರ ಪತ್ನಿ. ಪ್ರಾಥಮಿಕ ಶಿಕ್ಷಣವನ್ನು ಕೆದಿಲ ಅನುದಾನಿತ ಹಿ.ಪ್ರಾ.ಶಾಲೆಯಲ್ಲೂ, ಪ್ರೌಢ ಶಿಕ್ಷಣವನ್ನು ಕರ್ನಾಟಕ ಪ್ರೌಢಶಾಲೆ ಮಾಣಿಯಲ್ಲೂ ಪಡೆದ ಇವರು ಪುತ್ತೂರಿನ ವಿವೇಕಾನಂದ ಮಹಾವಿದ್ಯಾಲಯದಲ್ಲಿ ಬಿ.ಎಸ್ಸಿ ಪದವಿ ಪೂರೈಸಿದವರು. ಮೈಸೂರು ಮುಕ್ತ ವಿಶ್ವವಿದ್ಯಾಲಯದಲ್ಲಿ ಸಂಸ್ಕೃತದ ಸ್ನಾತಕೋತ್ತರ ಪದವಿಯನ್ನು ಚಿನ್ನದ ಪದಕದೊಂದಿಗೆ ವಿಶಿಷ್ಟ ಶ್ರೇಣಿಯಲ್ಲಿ ಪೂರೈಸಿದ ಪ್ರತಿಭಾವಂತೆ.