ಲೇಖಕಿ ಬಿ.ಜಿ. ಕುಸುಮಾ ಅವರಿಗೆವಿಜ್ಞಾನ ಶಿಕ್ಷಣದಲ್ಲಿ ಅತೀವ ಶ್ರದ್ಧೆ ಮತ್ತು ಕಲೆಯಲ್ಲಿ ಅಪಾರ ಆಸಕ್ತಿ. ಇವೆರಡರ ಸಾಂಗತ್ಯಕ್ಕೆ ಅವರ ವ್ಯಕ್ತಿತ್ವ. ಲೋಕದ ಆಗುಹೋಗುಗಳನ್ನು ವೈಚಾರಿಕ ದೃಷ್ಟಿಕೋನದಿಂದ ವಿಶ್ಲೇಷಿಸುವ, ಸಾಹಿತ್ಯ, ಸಂಗೀತ, ಗಮಕ ಇವುಗಳನ್ನು ಆಸ್ವಾದಿಸುವ ಸಂವೇದನೆ ಇವೆರಡರ ಹದವರಿತ ಮಿಶ್ರಣ ಇವರಲ್ಲಿ ಹಾಸುಹೊಕ್ಕಾಗಿದೆ. ಕಳೆದ 25 ವರ್ಷದಿಂದ ಬೆಂಗಳೂರಿನಲ್ಲಿ ಮಕ್ಕಳಿಗೆ ಬೇಸಿಗೆ ವಿಜ್ಞಾನ ಶಿಬಿರಗಳನ್ನು ನಿರಂತರ ನಡೆಸುತ್ತಾ ಬಂದಿದ್ದಾರೆ. ಪ್ರಸಿದ್ಧ ಗಮಕಿಗಳ ಕಾವ್ಯವಾಚನಕ್ಕೆ ವ್ಯಾಖ್ಯಾನ ಮಾಡುತ್ತಾರೆ. . ವಯಸ್ಸು 80 ದಾಟದ್ದರೂ ಜೀವನೋತ್ಸಾಹ ಕುಗ್ಗಿಲ್ಲ. ಬಡ ಹೆಣ್ಣುಮಕ್ಕಳ ಶಿಕ್ಷಣಕ್ಕೆ, ಮಹಿಳೆಯರ ಆರೋಗ್ಯ ರಕ್ಷಣೆಗೆ ಸ್ಪಂದಿಸಲು ಸಾಮಾಜಿಕ ಸೇವಾ ಟ್ರಸ್ಟ್ ಸ್ಥಾಪಿಸಿದ್ದಾರೆ. ಅವರ ಬಹುಮುಖ ಆಸಕ್ತಿಗೆ 'ವ್ಯಾಖ್ಯಾನ ವಿಶಾರದೆ' ಬಿರುದು, ಗಾರ್ಗಿ ಪ್ರಶಸ್ತಿ, ಎನ್‌ಸಿಇಆರ್‌ಟಿ ಪ್ರಶಸ್ತಿ ಮುಂತಾದವು ಸಂದಿವೆ.