ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿಯಲ್ಲಿ ಬಿ. ಪೀರ್ ಬಾಷ ಅವರು ಹುಟ್ಟಿದ್ದು 1972 ರ ಮೇ 1 ರಂದು. ತಂದೆ- ಬಿ.ಬಾಷಾ ಸಾಹೇಬ್ ಹಾಗೂ ತಾಯಿ- ಹಯಾತ್ ಬಿ. ಸದ್ಯ ಕೊಪ್ಪಳ ಜಿಲ್ಲೆಯ ಗಂಗಾವತಿಯ ಕಾರಟಗಿಯಲ್ಲಿ ವಾಸ. ಸಾಮಾಜಿಕ ಚಟುವಟಿಕೆಯೊಂದಿಗೆ ಬರವಣಿಗೆ ರೂಢಿಸಿಕೊಂಡಿರುವ ಪೀರ್ ಬಾಷ, ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಮಾಜಿ ಸದಸ್ಯರು.
ಕವನ ಸಂಕಲನಗಳು : ಜೀವ ಬಂತು ಹಾದಿಗೆ, ಜಾಲಿ ಹೂಗಳ ನಡುವೆ, ಅಕ್ಕಸೀತಾ ನಿನ್ನಂತೆ ನಾನೂ, ದೇವರು ಮನುಷ್ಯರಾದ ದಿನ, ಸಮಾಜವಾದಿ ಹೋರಾಟಗಾರರ ಸಂದರ್ಶನ ಮಾಡಿದ ಕೃತಿಗಳನ್ನು ಹಂಪಿಯ ಕನ್ನಡ ವಿ.ವಿ.ಪ್ರಕಟಿಸಿದೆ. ಸಮಾಜವಾದಿ ನೀಲಗಂಗಯ್ಯ ಪೂಜಾರ್ ಕುರಿತು ವ್ಯಕ್ತಿ ಚಿತ್ರಣ, ಸಂಪಾದಿತ ಕೃತಿ: ಶಿಲವೇರಿ ಶಿವಪ್ಪ ಸಂ (ತತ್ವಪದಗಳು), ಸೇರಿದಂತೆ ನಾಡಿನ ವಿವಿಧ ಪತ್ರಿಕೆಗಳಲ್ಲಿ ಇವರ ಲೇಖನಗಳು ಪ್ರಕಟವಾಗಿವೆ. ಲೋಹಿಯಾ ಪ್ರಶಸ್ತಿ- 2018, ಟಿಪ್ಪು ಸುಲ್ತಾನ್ ಸೌಹಾರ್ದ ಪ್ರಶಸ್ತಿ-2016 ಪ್ರಶಸ್ತಿಗಳು ಸಂದಿವೆ. ಸಾಮಾಜಿಕ ಕಳಕಳಿಯ ವಿವಿಧ ಸಂಘಟನೆಗಳೊಂದಿಗೆ ಸೇರಿ ಹೋರಾಟ ಮಾಡಿದ ಹಾಗೂ ಉಪನ್ಯಾಸ ನೀಡಿದ ಖ್ಯಾತಿಯೂ ಇವರಿಗಿದೆ.