ಡಾ. ಬಿ.ಆರ್. ಕೃಷ್ಣಕುಮಾರ್ ಚಾಮರಾಜನಗರದವರು. ಮೈಸೂರು ವಿಶ್ವವಿದ್ಯಾನಿಲಯದಿಂದ ಬಿ.ಎ., ಬಿ.ಇಡಿ ವ್ಯಾಸಂಗ. ಕರ್ನಾಟಕ ರಾಜ್ಯಮುಕ್ತ ವಿಶ್ವವಿದ್ಯಾನಿಲಯದಿಂದ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿ. 2005ನೇ ಇಸವಿಯಿಂದ ಚಾಮರಾಜನಗರ ಜಿಲ್ಲಾ ಪೊಲೀಸ್‌ನಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಆಗಿ ಕರ್ತವ್ಯ ನಿರ್ವಹಿಸಿದ್ದಾರೆ. ಇಲಾಖೆಯಿಂದ ಅನುಮತಿ ಪಡೆದು ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರೊ. ಕೆ.ಎನ್.ಗಂಗಾನಾಯಕ್ ರವರ ಮಾರ್ಗದರ್ಶನದಲ್ಲಿ ʻಆಧುನಿಕ ಕನ್ನಡ ಸಾಹಿತ್ಯದಲ್ಲಿ ಖಂಡಕಾವ್ಯಗಳು' ಎಂಬ ವಿಷಯದಲ್ಲಿ ಸಂಶೋಧನೆ ನಡೆಸಿ ಪಿಎಚ್.ಡಿ ಪದವಿಯನ್ನು ಪಡೆದಿದ್ದಾರೆ. ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಪ್ರಬಂಧ ಮಂಡನೆ, ದಿನಪತ್ರಿಕೆ, ವಾರಪತ್ರಿಕೆ, ಮಾಸಪತ್ರಿಕೆಗಳಲ್ಲಿ ಕಥೆ, ಕವನಗಳ ಪ್ರಕಟಣೆ ಇವರ ಹವ್ಯಾಸ. ಪ್ರಸ್ತುತ ಚಾಮರಾಜನಗರ ಜಿಲ್ಲೆ ಭ್ರಷ್ಟಾಚಾರ ನಿಗ್ರಹ ದಳದಲ್ಲಿ ಪೊಲೀಸ್ ಕಾನ್ಸ್‌ಟೇಬಲ್ ಆಗಿ ಕರ್ತವ್ಯನಿರ್ವಹಿಸುತ್ತಿದ್ದಾರೆ.