About the Author

ವೃತ್ತಿಯಿಂದ ಗ್ರಂಥಪಾಲಕರಾಗಿರುವ ಡಾ. ಬಿ.ಆರ್‍. ಸತ್ಯನಾರಾಯಣ ಅವರು ಪ್ರವೃತ್ತಿಯಿಂದ ಸಂಶೋಧಕ- ಲೇಖಕರೂ ಹೌದು. ಕೃಷಿಯಲ್ಲಿ ಆಸಕ್ತರಾಗಿರುವ ಸತ್ಯನಾರಾಯಣ ಅವರು ಹಳ್ಳಿ-ನಗರಗಳ ನಡುವೆ ಓಡಾಡಿದ ಅನುಭವದ ಹಿನ್ನೆಲೆಯಲ್ಲಿ ’ವೈತರಣೀ ದಡದಲ್ಲಿ (ಕವನ ಸಂಕಲನ) ಮತ್ತು ಮುಡಿ (ಕಥಾ ಸಂಕಲನ) ಪ್ರಕಟಿಸಿದ್ದಾರೆ. ಕನ್ನಡ ಛಂದಸ್ಸು: ಸಂಕ್ಷಿಪ್ತ ಪರಿಚಯ, ಕಲ್ಯಾಣದ ಚಾಲುಕ್ಯರು, ಸರಸ್ವತಿ- ವಿಸ್ಮಯ ಸಂಸ್ಕೃತಿ ಸಂಶೋಧನಾ ಕೃತಿ ರಚಿಸಿದ್ದಾರೆ. ಹಿರಿಯ ಸಂಶೋಧಕ ಹಂ.ಪ.ನಾಗರಾಜಯ್ಯ ಅವರ ಕೃತಿಗಳ ಸಾರ ಸೂಚಿ ಹೊಂದಿರುವ ’ಹಂಪನಾ ವಾಙ್ಮಯ’ ಪ್ರಕಟಿಸಿರುವ ಅವರು ಪೇಜತ್ತಾಯ ಅವರ ’ರೈತನಾಗುವ ಹಾದಿಯಲ್ಲಿ’ ಮತ್ತು ’ಕಾಗದದ ದೋಣಿ’ ಕೃತಿಗಳನ್ನು ಸಂಪಾದಕರಾಗಿ ಹೊರ ತಂದಿದ್ದಾರೆ. ’ಅಳಿದ ಮೇಲೆ’ ಕಥೆಗೆ ೨೦೦೧ರ ಕರ್ಮವೀರ ಕಥಾಸ್ಪರ್ಧೆಯಲ್ಲಿ ವಿಶೇಷ ಕಥೆಯಾಗಿ ಆಯ್ಕೆಯಾಗಿದೆ. ೨೦೦೩ರಲ್ಲಿ ಕೃಷ್ಣಮೂರ್ತಿ ಸಾಹಿತ್ಯ ಪ್ರಶಸ್ತಿಯು ಅವರ ’ಎತ್ತಣಿಂದೆತ್ತಣ ಸಂಬಂಧವಯ್ಯ..’ ಕಥೆಗೆ ಸಂದಿದೆ. ’ಮುಡಿ’ ಸಂಕಲನಕ್ಕೆ ಎಂ.ಜಿ.ರಂಗನಾಥನ್ ಸ್ಮಾರಕ ಪುಸ್ತಕ ಪ್ರಶಸ್ತಿ ಬಂದಿದೆ.

 

ಬಿ.ಆರ್. ಸತ್ಯನಾರಾಯಣ