About the Author

ಸಾಹಿತಿ ಬಸವರಾಜ ಜಗಜಂಪಿ ಅವರು 1950 ಮೇ 25ರಂದು ಬೆಳಗಾವಿಯಲ್ಲಿ ಜನಿಸಿದರು. ತಂದೆ ಕಲ್ಲಪ್ಪನವರ, ತಾಯಿ ಈರವ್ವ. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಕನ್ನಡ ಸ್ನಾತಕೋತ್ತರ ಪದವೀಧರರು. ಬೆಳಗಾವಿ ಲಿಂಗರಾಜ ಮಹಾವಿದ್ಯಾಲಯದಲ್ಲಿ ಕನ್ನಡ ಪ್ರಾಧ್ಯಾಪಕರಾಗಿ,ಪ್ರಸ್ತುತ ಗ್ರಂಥಾಲಯ ಆಡಳಿತ ನಿರ್ದೇಶಕರಾಗಿ ಕೆ.ಎಲ್.ಇ. ಮಹಾವಿದ್ಯಾಲಯ ಬೆಳಗಾವಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ವಚನ ಸಾಹಿತ್ಯ, ಜನಪದ ಸಾಹಿತ್ಯ ಕ್ಷೇತ್ರಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಪ್ರಮುಖ ಕೃತಿಗಳೆಂದರೆ ಕನ್ನಡ ಸಾಹಿತ್ಯ ಹಾಗೂ ಜೀವನ ಮೌಲ್ಯಗಳು, ಬಸವಪ್ರಭಪ್ಪನವರು ಹಂಪಣ್ಣವರ, ಮಲ್ಲಿಕಾರ್ಜುನ ದರ್ಶನ, ಕನ್ನಡ ಕಾಯಕಯೋಗಿ ಶಿವಬಸವ ಸ್ವಾಮಿಜಿ, ಕವಿ ಸಿದ್ದೇನಂಜೇಶ, ಕೆ.ಎಲ್.ಇ. ಸೊಸೈಟಿ, ಫ.ಗು. ಹಳಕಟ್ಟಿ ಸಮಗ್ರ ಸಾಹಿತ್ಯ, ಬೆಳಗಲಿ ಬಯಲ ಸಿರಿ, ರಸಾಯನ, ಸ್ಪಂದನ, ಶ್ರೀಗುರು, ಬಸವಪ್ರಸಾದ ಮುಂತಾದವು. 

 

ಬಸವರಾಜ ಜಗಜಂಪಿ

(25 May 1950)