ಕನ್ನಡ ಬರಹಗಾರ್ತಿ ಭಾರತೀ ಕಾಸರಗೋಡು ಅವರು ತತ್ವಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಅವರ ಮೊದಲನೆಯ ಕೃತಿ ವೀಣೆಯ ನೆರಳಲ್ಲಿ, ಡಾ. ವಿ.ದೊರೆಸ್ವಾಮಿ ಅಯ್ಯಂಗಾರ್ ಅವರ ಜೀವನವನ್ನು ಕುರಿತದ್ದು. ಈ ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಆರ್ಯಭಟ ಪ್ರಶಸ್ತಿ ಮತ್ತು ಅತ್ತಿಮಬ್ಬೆ ಬಹುಮಾನಗಳು ದಕ್ಕಿವೆ. ಬೆಂಗಳೂರಿನಲ್ಲಿ ವಾಸಿಸುತ್ತಿರುವ ಭಾರತಿಯವರ ಇತರ ಪ್ರಕಟಿತ ಪುಸ್ತಕಗಳು ಚಂದನ (ಪ್ರಬಂಧ ಸಂಕಲನ), ರಾಸದರ್ಶನ (ತಂದೆ ಶ್ರೀ ಸಮೇತನಹಳ್ಳಿ ರಾಮರಾಯರಿಗೆ ಅರ್ಪಿಸಿದ ಅಭಿನಂದನ ಗ್ರಂಥ), ಜೀವಿ: ಜೀವ--ಭಾವ (ವಿದ್ವಾಂಸ ಶ್ರೀ ಜಿ. ವೆಂಕಟಸುಬ್ಬಯ್ಯ ಅವರ ಸಂಕ್ಷಿಪ್ತ ಜೀವನ ಚರಿತ್ರೆ), ಮತ್ತು ಬಂಧಬಂಧುರ (ಸಂಪಾದಿತ ಪ್ರಬಂಧ ಸಂಕಲನ).