ಚಂದ್ರಶೇಖರ ವಸ್ತ್ರದ ಅವರು ಮೂಲತಃ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನವರು. ವಿವಿಧ ವಿಭಾಗಗಳಲ್ಲಿ ಸಾಮಾಜಿಕ, ಸಾಂಸ್ಕೃತಿಕ ವಲಯದಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯತ್ವ, ಡಾ. ದ.ರಾ ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಸಂಸ್ಥಾಪಕ ಸದಸ್ಯ ಕಾರ್ಯದರ್ಶಿ, ಕರ್ನಾಟಕ ಚಲನಚಿತ್ರ ಮಂಡಳಿ-ಗದಗ ಜಿಲ್ಲಾ ’ಬೆಳ್ಳಿ ಸಾಕ್ಷಿ’ ತಂಡದ ಜಿಲ್ಲಾ ಸದಸ್ಯ, ಕರ್ನಾಟಕ ಗಮಕ ಕಲಾ ಪರಿಷತ್ತಿನಲ್ಲಿ ಜಿಲ್ಲಾ ಅಧ್ಯಕ್ಷರಾಗಿ ಅನೇಕ ಹುದ್ದೆಗಳನ್ನು ನಿರ್ವಹಿಸಿದ್ದಾರೆ.
ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಘಟಿಸಿದ್ದಾರೆ. ಮಾನವತಾವಾದಿ ಬಸವಣ್ಣನವರು, ಕುಲಕ್ಕೆ ತಿಲಕ ಮಾದಾರ ಚನ್ನಯ್ಯ, ಬೆಳಗು, ಹರಿದಾವ ನೆನಪು, ಮಭನದ ಮಾತುಗಳು, ಪ್ರೀತಿ ಎಂದರೆ,,,,ಅಭಿನವ ದುಶ್ಯಾಸನ ಮುಂತಾದ ಕೃತಿಗಳನ್ನು ರಚಿಸಿದ್ದಾರೆ. ನಿರ್ವಚನ, ರತ್ನಾಕರವರ್ಣಿ, ಸ್ವರಗುರು, ಸಮೀಕ್ಷೆ, ಕೃತಪುರ, ಸ್ವಯಂ ಶಿಲ್ಪಿ ಹೀಗೆ ಸಂಪಾದಿತ ಕೃತಿಗಳನ್ನು ಪ್ರಕಟಿಸಿದ್ದಾರೆ.