ಡಿ. ಬಿ. ರಜಿಯಾ ಮೂಲತಃ ಬಳ್ಳಾರಿ ಜಿಲ್ಲೆಯ ಹಿರೇಕಾಳಿನವರು. 1954 ಜನವರಿ 26ರಂದು ಜನನ. ತಂದೆ ಹೆಚ್. ಇಬ್ರಾಹಿಂ, ತಾಯಿ ಸಕೀನಾ ಬೇಗಂ. ‘ಛಾಯೆ, ಕಳೆದು ಹೋಗುತ್ತೇವೆ, ಋತು’ ಎಂಬ ಹನಿಗವನಗಳನ್ನು ರಚಿಸಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯೆಯಾಗಿಯೂ ಸಹ ಸೇವೆ ಸಲ್ಲಿಸಿದ್ದಾರೆ.
‘ವಾಸ್ತವದ ಕನವರಿಕೆ’ ಅವರ ಕಥಾ ಸಂಕಲನವಾಗಿದೆ. ಅವರಿಗೆ ಡಾ. ದಿನಕರ ದೇಸಾಯಿ ಪ್ರತಿಷ್ಠಾನ ಪ್ರಶಸ್ತಿ, ಕರ್ನಾಟಕ ಲೇಖಕಿಯರ ಸಂಘದ ಗೀತಾ ದೇಸಾಯಿ ದತ್ತಿ ಬಹುಮಾನ, ಕರಾವಳಿ ಲೇಖಕಿಯರು ವಾಚಕಿಯರ ಸಂಘದ ಕೃಷ್ಣಬಾಯಿ ದತ್ತಿ ಬಹುಮಾನ, ಅಮ್ಮ ಪ್ರಶಸ್ತಿ, ಮಾತೃಶ್ರೀ ರತ್ನಮ್ಮ ಹೆಗಡೆ ಬಹುಮಾನ , ಹರಿಹರಶ್ರೀ ಪ್ರಶಸ್ತಿ, ಲಂಕೇಶ್ ಪ್ರಶಸ್ತಿ’ಗೆ ಭಾಜನರಾಗಿದ್ದಾರೆ.