ಲೇಖಕಿ ಡಿ. ನಾಗರತ್ನ ಅವರು ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನ ಶಾನವಾಸಪುರ ಗ್ರಾಮದವರು. ತಂದೆ ಮಹೇಂದ್ರ.ಡಿ, ತಾಯಿ ನಾಗರತ್ನಮ್ಮ.ಡಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಶ್ರೀಮತಿ ಅಲ್ಲಂ ಸುಮಂಗಳಮ್ಮ ಮಹಿಳಾ ಕಾಲೇಜಿನಲ್ಲಿ ಪದವಿ ಪೂರ್ವ ಹಾಗೂ ಪದವಿ ಶಿಕ್ಷಣ, ಕನ್ನಡ ವಿಶ್ವವಿದ್ಯಾಲಯದಲ್ಲಿ ಎಂ ಎ ಕನ್ನಡ ಸಾಹಿತ್ಯದಲ್ಲಿ ಪದವಿ, ಪ್ರಸ್ತುತ ಕನ್ನಡ ವಿಶ್ವವಿದ್ಯಾಲಯದಲ್ಲಿ ಹಸ್ತಪ್ರತಿಶಾಸ್ತ್ರ ವಿಭಾಗದಲ್ಲಿ ಸಂಶೋಧನಾ ವಿದ್ಯಾರ್ಥಿನಿ. . ಕೃತಿಗಳು: ಶರಣ ಸಂಸ್ಕೃತಿ (ವಿಮರ್ಶಾ ಲೇಖನಗಳ ಸಂಗ್ರಹ)