ಧಾರಿಣಿ ಮಾಯಾ ಅವರು ಮೈಸೂರಿನ ಪತ್ರಿಕೋದ್ಯಮ ವಿಭಾಗದಲ್ಲಿ ಪದವಿ ಹಾಗೂ ಇಂಗ್ಲೀಷ್ ವಿಭಾಗದಲ್ಲಿ ಸ್ನಾತ್ತಕೋತ್ತರ ಪದವಿ ಪಡೆದಿದ್ದು, ಓದು- ಬರಹದಲ್ಲಿ ಆಸಕ್ತಿ, ಬರವಣಿಗೆಯನ್ನು ಪ್ರಾರಂಭಿಸಿ ಹವ್ಯಾಸಿ ಬರಹಗಾರ್ತಿಯಾಗಿ, ಸಾಹಿತ್ಯ ಕಣಜವು ಕಥೆ, ಕವನ, ಲೇಖನ ಹಾಗೂ ಲಲಿತ ಪ್ರಬಂಧಗಳ ಪ್ರಕಾರಗಳನ್ನು ಒಳಗೊಂಡಿದೆ. ಬಹುತೇಕ ಬರಹಗಳು ಭೂಮಿಕಾ, ಸುಧಾ, ತರಂಗ, ವಿಶ್ವವಾಣಿ, ವಿಜಯ ಕರ್ನಾಟಕ, ಮಂಗಳ, ಕರ್ಮವೀರ, ಹಾಗೂ ವಿನಯವಾಣಿ ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. 'ನೇಯ್ದೆನುಡಿ' ಎಂಬ ಮಾಸಿಕ ಪತ್ರಿಕೆಯಲ್ಲಿ ಇವರ ಅಂಕಣ ಬರಹಗಳು ಕಳೆದ ಮೂರು ವರ್ಷಗಳಿಂದ ಸತತವಾಗಿ ಮೂಡಿ ಬರುತ್ತಿವೆ. ಚಿತ್ರಕಲೆ, ವಾಲ್ ಪೇಂಟಿಂಗ್, ಅಡುಗೆ, ಸ್ಟ್ರೀಟ್ ಫೋಟೋಗ್ರಾಫಿ ಹವ್ಯಾಸವಾಗಿದ್ದು ಚಿಕ್ಕಂದಿನಿಂದಲೂ ನೃತ್ಯ, ನಾಟಕ ಇವರ ನೆಚ್ಚಿನ ರಂಗಗಳು, ಕೌಂಟುಬಿಕ ಆಧಾರಿತ “ಮನೋರಮೆಯರ ತಲ್ಲಣಗಳು” ಎಂಬ ನಾಟಕವನ್ನು (ಮ್ಯೂಸಿಕಲ್ ಡ್ರಾಮಾ) ರಚಿಸಿ, ನಿರ್ದೇಶಿಸಿ ನಟಿಸಿದ್ದಾರೆ.