ದಿನೇಶ್ ಹೊಳ್ಳ ಅವರು ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮೊಡಂಕಾಪಿನವರು. ಪರಿಸರ ಪ್ರೇಮಿ. ಗಾಳಿಪಟ ರಚನೆಕಾರ, ಸಾಹಿತಿ, ರೇಖಾಚಿತ್ರಕಾರ, ವಿಮರ್ಶಕ, ಛಾಯಾಚಿತ್ರಕಾರ. ತಮ್ಮ ಪ್ರಾಥಮಿಕ ಶಿಕ್ಷಣವನ್ನು ಮೊಡಂಕಾಪುವಿನ ಇನ್ಪೆಂಟ್ ಜೀಸಸ್ ಸ್ಕೂಲ್ ನಲ್ಲಿ ಹಾಗೂ ದೀಪಿಕಾ ಹೈಸ್ಕೂಲ್ ನಲ್ಲಿ ಪ್ರೌಢ ಶಿಕ್ಷಣವನ್ನು ಪಡೆದಿರುತ್ತಾರೆ. ಪಿಯುಸಿ ಶಿಕ್ಷಣದ ಬಳಿಕ ಸುಂಕದ ಕಟ್ಟೆಯ ಎಸ್.ಎಂ.ಎಸ್ ಪಾಲಿಟೆಕ್ನಿಕ್ ನಲ್ಲಿ ತಾಂತ್ರಿಕ ಶಿಕ್ಷಣ ಪೂರೈಸಿದ್ದಾರೆ. 1989ರಲ್ಲಿ “ಮೇಷಾ ಗ್ರಾಫಿಕ್ಸ್” ಸಂಸ್ಥೆಯನ್ನು ಆರಂಭಿಸಿ, ಕಳೆದ 32 ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದಾರೆ.