ಕವಯತ್ರಿ ಫರ್ಹಾನಾಜ್ ಮಸ್ಕಿ ಅವರು ಮೂಲತಃ ರಾಯಚೂರು ಜಿಲ್ಲೆಯ ಮಸ್ಕಿಯವರು. ಪ್ರಸ್ತುತ , ಹುಳಿಯಾರಿನ ಬಿಎಂಎಸ್ ಸರ್ಕಾರಿ ಪದವಿ ಕಾಲೇಜಿನಲ್ಲಿ ಅರ್ಥಶಾಸ್ತ್ರದ ಸಹಾಯಕ ಪ್ರಾಧ್ಯಾಪಕಿ. ಕನ್ನಡ ಪುಸ್ತಕ ಪ್ರಾಧಿಕಾರದ ಯುವ ಬರಹಗಾರರ ಚೊಚ್ಚಲ ಕೃತಿ ಯೋಜನೆ ಅಡಿ, ಅವರ ‘ಮೌನ ಮನದ ಮಾತುಗಳು ’ (ಕವನ ಸಂಕಲನ) ಪ್ರಕಟಗೊಂಡಿದೆ. ವಿದ್ಯಾರ್ಥಿ ಜೀವನದಿಂದಲೇ ಆಲ್ ಇಂಡಿಯಾ ರೇಡಿಯೋ ದಲ್ಲಿ ಕವನ, ಲೇಖನ, ರೆಕಾರ್ಡಿಂಗ್ ಮತ್ತು ಅಗ್ನಿ ಅಸ್ತ್ರ ಪತ್ರಿಕೆಯಲ್ಲೂ ಅಂಕಣಗಾರ್ತಿಯಾಗಿ ಬರವಣಿಗೆಯಲ್ಲಿ ತೊಡಗಿಸಿಕೊಂಡಿರುತ್ತಾರೆ. ಹಲವು ಆನ್‌ಲೈನ್ ಸಾಹಿತ್ಯಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ.