ಜಿ.ವಿ.ಡಿ ಎಂದು ಸಾಹಿತ್ಯ ಲೋಕದಲ್ಲಿ ಪರಿಚಿತರಾಗಿದ್ದ ಡಾ. ಜಿ.ವಿ. ದಾಸೇಗೌಡ ಅವರು ಹಿರಿಯ ಸಾಹಿತಿ, ಜಾನಪದ ತಜ್ಞ.
ಜಾನಪದ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ್ದ ಅವರು ಜಾನಪದ ಮತ್ತು ಸೃಜನಶೀಲ ಸಾಹಿತ್ಯ ಕ್ಷೇತ್ರದಲ್ಲಿ 65ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ಕಥೆ, ಕವಿತೆ, ಕಾದಂಬರಿ, ವಿಮರ್ಶೆ, ನಾಟಕ, ಕಾವ್ಯ ಮೀಮಾಂಸೆ, ಪ್ರಬಂಧ ಸಾಹಿತ್ಯ ಪ್ರಕಾರಗಳಲ್ಲಿ ಕೃತಿ ರಚಿಸಿ ಪ್ರಕಟಿಸಿದ್ದರು.
ಕನ್ನಡದ ಜೊತೆಗೆ ಇಂಗ್ಲಿಷ್, ಹಿಂದಿ, ಸಂಸ್ಕೃತ, ಪ್ರಾಕೃತ ಭಾಷೆಗಳನ್ನು ಬಲ್ಲವರಾಗಿದ್ದ ಅವರು ಕನ್ನಡ ಪ್ರಾದ್ಯಾಪಕರಾಗಿ ಮಂಡ್ಯದ ಕೆ.ಎಂ.ದೊಡ್ಡಿ, ಮಡಿಕೇರಿ, ತುಮಕೂರು, ಮಂಡ್ಯ, ಮತ್ತಿತರ ಸರ್ಕಾರಿ ಕಾಲೇಜುಗಳಲ್ಲಿ 32 ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.
ಮೈಸೂರು ವಿವಿಯಲ್ಲಿ ಕನ್ನಡ ಪರೀಕ್ಷಾ ಮಂಡಳಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರಿಗೆ ಜಾನಪದ ಅಕಾಡೆಮಿ ಪ್ರಶಸ್ತಿ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.