About the Author

ತುಳು ಹಾಗೂ ಕನ್ನಡ ಸಾಹಿತಿ, ಜಾನಪದ ವಿದ್ವಾಂಸ ಡಾ. ಗಣನಾಥ ಎಕ್ಕಾರು ಮುಂಬಯಿ ವಿ.ವಿ.ಯಿಂದ ಕನ್ನಡ ಎಂ.ಎ. ಪದವಿಯನ್ನು ಪ್ರಥಮ ರ್‍ಯಾಂಕ್ ಮತ್ತು ಚಿನ್ನದ ಪದಕದೊಂದಿಗೆ ಪಡೆದಿದ್ದಾರೆ. ಮಂಗಳೂರು ವಿ.ವಿ.ಯಿಂದ ಪಿಹೆಚ್.ಡಿ. ಪಡೆದಿರುವ ಅವರು ಕನ್ನಡ ಪ್ರಾಧ್ಯಾಪಕರಾಗಿ, ಪ್ರಾಚಾರ್ಯರಾಗಿ ಇಪ್ಪತ್ತೈದು ವರ್ಷ ಸೇವೆಸಲ್ಲಿಸಿದ್ದಾರೆ. ಪ್ರಸ್ತುತ ರಾಷ್ಟ್ರೀಯ ಸೇವಾ ಯೋಜನೆಯ (ಎನ್ನೆಸ್ಸೆಸ್) ರಾಜ್ಯ ಯೋಜನಾಧಿಕಾರಿಯಾಗಿ ಬೆಂಗಳೂರಿನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಅವರು ವಿಶ್ವವಿದ್ಯಾನಿಲಯ ಕನ್ನಡ ಅಧ್ಯಾಪಕ ಸಂಘದ ಅಧ್ಯಕ್ಷರಾಗಿ, ಉಡುಪಿ ತಾಲೂಕು ಕ.ಸಾ.ಪ. ಅಧ್ಯಕ್ಷರಾಗಿ ಸ್ಮರಣೀಯ ಸೇವೆ ಸಲ್ಲಿಸಿದವರು. ಪ್ರಸಕ್ತ ಕೆಮ್ಮಲಜೆ ಜಾನಪದ ಪ್ರಕಾಶನ, ಕೆಮ್ತೂರು ದೊಡ್ಡಣ್ಣ ಶೆಟ್ಟಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷರಾಗಿ, ಉಡುಪಿ ತಾಲ್ಲೂಕು ಜಾನಪದ ಪರಿಷತ್ತಿನ ಅಧ್ಯಕ್ಷರಾಗಿ, ಕಾಂತಾವರ ಅಲ್ಲಮ ಪ್ರಭು ಪೀಠದ ನಿರ್ದೇಶಕರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ. 'ತುಳುನಾಡಿನ ಜನಪದ ಆಟಗಳು', 'ಸಾಹಿತ್ಯ ಲಹರಿ', `ಕಮ್ಮೂರು ದೊಡ್ಡಣ್ಣ ಶೆಟ್ಟಿಯವರ ಕವಿತೆಗಳು' ಸೇರಿದಂತೆ ಒಟ್ಟು ಹತ್ತು ಕೃತಿಗಳನ್ನು ಅವರು ಪ್ರಕಟಿಸಿದ್ದಾರೆ.

ಗಣನಾಥ ಎಕ್ಕಾರು